Wednesday, September 3, 2025
Google search engine

Homeಸ್ಥಳೀಯಮೈಸೂರು ದಸರಾ ಉದ್ಘಾಟಕರಾಗಿ ಬಾನು ಮುಷ್ತಾಕ್ ಆಯ್ಕೆ: ಆಹ್ವಾನಕ್ಕೆ ಜಿಲ್ಲಾಡಳಿತ ಸಿದ್ಧ

ಮೈಸೂರು ದಸರಾ ಉದ್ಘಾಟಕರಾಗಿ ಬಾನು ಮುಷ್ತಾಕ್ ಆಯ್ಕೆ: ಆಹ್ವಾನಕ್ಕೆ ಜಿಲ್ಲಾಡಳಿತ ಸಿದ್ಧ

ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಉದ್ಘಾಟಕರಾಗಿ ಬಾನು ಮುಷ್ತಾಕ್ ಆಯ್ಕೆ ವಿವಾದವಾದ ಬೆನ್ನಲ್ಲೇ ಆಹ್ವಾನಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿದೆ.

ಮೈಸೂರು ಜಿಲ್ಲಾಡಳಿತದಿಂದ ಅಧಿಕೃತ ಆಹ್ವಾನಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ನಾಳೆ ಸಂಜೆ 4 ಗಂಟೆಗೆ ಹಾಸನದಲ್ಲಿರುವ ಬಾನು ಮುಷ್ತಾಕ್ ಅವರ ಸ್ವಗೃಹದಲ್ಲಿ ಆಹ್ವಾನ ನೀಡಲಾಗುತ್ತದೆ. ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಮೈಸೂರು ಜಿಲ್ಲಾಡಳಿತ ಮಾಹಿತಿ ನೀಡಿದೆ. ಬಾನು ಮುಷ್ತಾಕ್ ಗೆ ರಾಜ್ಯ ಸರ್ಕಾರದ ಪರವಾಗಿ ಅಧಿಕೃತ ಆಹ್ವಾನ ಇದಾಗಲಿದೆ. ಈಗಾಗಲೇ ಅಧಿಕಾರಿಗಳ ತಂಡ ಇದಕ್ಕೆ ಸರ್ವ ತಯಾರಿ ನಡೆಸಿದೆ.

ದಸರಾ ಉದ್ಘಾಟನೆ ವಿಚಾರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಬಿಜೆಪಿ ಹಾಗೂ ಕಾಂಗ್ರೇಸ್ ನಡುವೆ ವಾಕ್ಸಮರ ಜೋರಿದೆ. ಈ ನಡುವೆ ಎಲ್ಲಾ ವಿವಾದಗಳನ್ನು ಮರೆತು ಜಿಲ್ಲಾಡಳಿತ ಸರ್ಕಾರದ ಪರವಾಗಿ ಆಹ್ವಾನ ನೀಡಲಿದೆ.

ಏರ್ ಶೋ ಮೆರಗು..!: ನಾಡಹಬ್ಬ ದಸರಾ ಮಹೋತ್ಸವದಲ್ಲಿ ಏರ್‌ ಶೋ ನಡೆಯಲಿದೆ. ಯಾವ ದಿನದಂದು ಏರ್ ಶೋ ನಡೆಯುತ್ತೆ ಎನ್ನುವ ಬಗ್ಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಮಾಹಿತಿ ಹಂಚಿಕೊಂಡಿದ್ದಾರೆ.

ವೈಮಾನಿಕ ಪ್ರದರ್ಶನವನ್ನು ಮೈಸೂರಿಗರೂ ಎರಡು – ಮೂರು ಬಾರಿ ಕಣ್ತುಂಬಿಕೊಂಡಿದ್ದಾರೆ. ಈ ಹಿಂದೆ 2023, 2019 ಹಾಗೂ 2017 ರಲ್ಲಿ ಏರ್‌ ಶೋ ದಸರಾದಲ್ಲಿ ನಡೆದಿತ್ತು. ಕಳೆದ ವರ್ಷ ಬೆಂಗಳೂರಿನ ಯಲಹಂಕ ವಾಯುನೆಲೆಯಲ್ಲಿ ಏರ್‌ ಶೋ ಹಮ್ಮಿಕೊಳ್ಳಲಾಗಿತ್ತು. ಅಲ್ಲದೆ, ಮೈಸೂರು ದಸರಾದಲ್ಲಿ ಡ್ರೋಣ್‌ ಶೋ ನಡೆಸಲಾಗಿತ್ತು. ಈ ಎರಡು ಶೋ ನೋಡಲು ಜನರು ಆಗಮಿಸಿದ್ದರು. ಆದರೆ, ಈ ಬಾರಿ ದಸರಾ ಸಂದರ್ಭದಲ್ಲಿ ಏರ್‌ ಶೋ ಹಮ್ಮಿಕೊಳ್ಳಬೇಕೆಂಬುದು ಸರ್ಕಾರದ ಚಿಂತನೆಯಾಗಿತ್ತು. ಅದರಂತೆ ಕೇಂದ್ರ ಸರ್ಕಾರ ಒಪ್ಪಿಗೆ ನೀಡಿರುವುದು ಸಾರ್ವಜನಿಕರಲ್ಲಿ ಮತ್ತಷ್ಟು ಖುಷಿ ನೀಡಿದೆ.

ಡ್ರೋನ್ ಶೋ ವೈಭವ..! ವಿಶ್ವವಿಖ್ಯಾತ ನಾಡಹಬ್ಬ ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ಡ್ರೋನ್‌ ಶೋ ಪ್ರಾಯೋಗಿಕ ಪ್ರದರ್ಶನವನ್ನು ಸೆ.28 ಮತ್ತು 29ರಂದು ನಡೆಸಲು ಸಮಯ ನಿಗದಿಪಡಿಸಲಾಗಿದೆ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಕಾಂತ ರೆಡ್ಡಿ ತಿಳಿಸಿದರು.

ದಸರಾ ಮಹೋತ್ಸವದ ವಿದ್ಯುತ್‌ ದೀಪಾಲಂಕಾರಕ್ಕೆ ಸಂಬಂಧಿಸಿದಂತೆ ವಿಜಯನಗರ 2ನೇ ಹಂತದಲ್ಲಿರುವ ನಿಗಮದ ಪ್ರಧಾನ ಕಚೇರಿಯಲ್ಲಿ ನಡೆದ ಪೂರ್ವಭಾವಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಡ್ರೋನ್‌ ಶೋ ಜೊತೆಗೆ ದಸರಾ ವಿದ್ಯುತ್‌ ದೀಪಾಲಂಕಾರ ಹಾಗೂ ಡ್ರೋನ್‌ ಶೋ ಕಾರ್ಯಕ್ರಮ ಯಶಸ್ವಿಯಾಗಿ ನಡೆಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಚಾಮುಂಡೇಶ್ವರಿ ವಿದ್ಯುತ್‌ ಸರಬರಾಜು ನಿಗಮ ನಿಯಮಿತದ ಅಧಿಕಾರಿಗಳಿಗೆ ಸೂಚಿಸಿದರು.

RELATED ARTICLES
- Advertisment -
Google search engine

Most Popular