Wednesday, September 3, 2025
Google search engine

Homeಕ್ರೀಡೆಸೆ.6ರಂದು ಬಳ್ಳಾರಿ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟಗಳು

ಸೆ.6ರಂದು ಬಳ್ಳಾರಿ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟಗಳು

ಬಳ್ಳಾರಿ: ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ 2025-26 ನೇ ಸಾಲಿನ ಬಳ್ಳಾರಿ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟಗಳನ್ನು ಸೆ.06 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಜಿಲ್ಲಾ ಕ್ರೀಡಾಂಗಣ ಮತ್ತು ಬಿಡಿಎಎ ಫುಟ್ಬಾಲ್ ಮೈದಾನದಲ್ಲಿ ಆಯೋಜಿಸಲಾಗಿದೆ.

ಕ್ರೀಡಾಕೂಟಗಳು: ಅಥ್ಲೆಟಿಕ್ಸ್, ವಾಲಿಬಾಲ್, ಕಬಡ್ಡಿ, ಖೋ-ಖೋ, ಫುಟ್ಬಾಲ್ (ಪುರುಷರಿಗೆ ಮಾತ್ರ), ಥ್ರೋಬಾಲ್, ಬಾಲ್ ಬ್ಯಾಡ್ಮಿಂಟ್, ಬ್ಯಾಡ್ಮಿಂಟನ್, ಬ್ಯಾಸ್ಕೆಟ್ ಬಾಲ್, ಹಾಕಿ, ಹ್ಯಾಂಡ್‌ಬಾಲ್, ಟೇಬಲ್ ಟೇನ್ನಿಸ್, ಕುಸ್ತಿ ಮತ್ತು ಯೋಗಾ. ನೇರ ಆಯ್ಕೆ: ಟೆನ್ನಿಸ್, ನೆಟ್‌ಬಾಲ್ ಮತ್ತು ಈಜು.

ಸೂಚನೆ: ಜಿಲ್ಲೆ ದಸರಾ ಸ್ಪರ್ಧೆಗಳಲ್ಲಿ ಆಯಾ ಜಿಲ್ಲೆ ಕ್ರೀಡಾಪಟುಗಳು ಮಾತ್ರ ಭಾಗವಹಿಸಲು ಅವಕಾಶ. ಕ್ರೀಡಾಪಟುಗಳು ಪ್ರತಿನಿಧಿಸುವ ತಾಲ್ಲೂಕು/ಜಿಲ್ಲೆ ದೃಢೀಕರಣದ ಬಗ್ಗೆ ದಾಖಲೆ ಸಲ್ಲಿಸಬೇಕು ಹಾಗೂ ನೋಂದಣಿ ಸಮಯದಲ್ಲಿ ಕಡ್ಡಾಯವಾಗಿ ಹಾಜರುಪಡಿಸಬೇಕು (ಶಾಲಾ, ಕಾಲೇಜಿನ ಗುರುತಿನ ಚೀಟಿ, ಆಧಾರ್ ಕಾರ್ಡ್, ರೇಷನ್ ಕಾರ್ಡ್, ಮತದಾರರ ಗುರುತಿನ ಚೀಟಿ ಹಾಗೂ ಸರ್ಕಾರದಿಂದ ಅಧಿಕೃತ ಇರುವ ಇತರೆ ಗುರುತಿನ ಚೀಟಿ). ಬೇರೆ ಜಿಲ್ಲೆಯಿಂದ ಭಾಗವಹಿಸುವ ಕ್ರೀಡಾಪಟುಗಳಿಗೆ ಅವಕಾಶ ಇರುವುದಿಲ್ಲ. ಕ್ರೀಡಾಪಟುಗಳು ವಿದ್ಯಾಭ್ಯಾಸ, ಸೇವೆಯಲ್ಲಿದ್ದರೆ ಸಂಬAಧಪಟ್ಟ ಕಾಲೇಜು-ಸಂಸ್ಥೆಗಳ ಗುರುತಿನ ಚೀಟಿಯೊಡನೆ ಭಾಗವಹಿಸಲು ಅವಕಾಶವಿದೆ.

ಪ್ರಸಕ್ತ ಸಾಲಿನಿಂದ ದಸರಾ ಕ್ರೀಡಾ ಕೂಟದಲ್ಲಿ ಭಾಗವಹಿಸುವ ಕ್ರೀಡಾಪಟುಗಳನ್ನು ತಾಲ್ಲೂಕು, ಜಿಲ್ಲೆ ಮತ್ತು ವಿಭಾಗ ಮಟ್ಟದವರಿಗೆ Dasara CM Cup 2025 Sports Registration QR Code ನಲ್ಲಿ ಕಡ್ಡಾಯವಾಗಿ ನೋಂದಣಿ ಮಾಡಿಕೊಳ್ಳಬೇಕು. ಇಲ್ಲವಾದಲ್ಲಿ ಕ್ರೀಡಾ ಕೂಟದಲ್ಲಿ ಭಾಗವಹಿಸಿಲು ಅವಕಾಶ ಇರುವುದಿಲ್ಲ.
ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಭಾಗವಹಿಸಿದ ವೈಯಕ್ತಿಕ ಕ್ರೀಡೆಗಳಲ್ಲಿ ಪ್ರಥಮ ಮತ್ತು ದ್ವಿತೀಯ ಸ್ಥಾನ ಪಡೆದವರು ಮತ್ತು ಗುಂಪು ಆಟಗಳಲ್ಲಿ ಪ್ರಥಮ ಸ್ಥಾನ ಪಡೆದ ಕ್ರೀಡಾಪಟುಗಳು ಭಾಗವಹಿಸಬಹುದು.

ವಿವಿಧ ಮಟ್ಟದ ದಸರಾ ಕ್ರೀಡಾ ಕೂಟದ ಸ್ಪರ್ಧೆಗಳಲ್ಲಿ ಭಾಗವಹಿಸಲು ಕರ್ನಾಟಕ ರಾಜ್ಯದಲ್ಲಿ ವಾಸಿಸುವ ಕ್ರೀಡಾಪಟುಗಳು ಮಾತ್ರ ಅರ್ಹರಿರುತ್ತಾರೆ. ಕ್ರೀಡಾ ಕೂಟದಲ್ಲಿ ರಕ್ಷಣಾ ಪಡೆ, ಅರೆ ರಕ್ಷಣಾ ಪಡೆ, ಸೇರಿದ ಕ್ರೀಡಾಪಟುಗಳು ಭಾಗವಹಿಸಲು ಅವಕಾಶ ಇರುವುದಿಲ್ಲ.

ಜಿಲ್ಲಾ ಮಟ್ಟದಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ ಊಟದ ವ್ಯವಸ್ಥೆ ಮತ್ತು ಪ್ರಯಾಣ ಭತ್ಯೆಯನ್ನು ಸರ್ಕಾರಿ ಬಸ್ ಧರಗಳನ್ವಯ ಕೆ2 ಮೂಲಕ ಕ್ರೀಡಾಪಟುಗಳ ಬ್ಯಾಂಕ್ ಖಾತೆಗೆ ಜಮೆ ಮಾಡಲಾಗುತ್ತದೆ. ಒಬ್ಬ ಕ್ರೀಡಾಪಟು ಕೇವಲ ಒಂದು ಗುಂಪು ಕ್ರೀಡೆಯಲ್ಲಿ ಮಾತ್ರ ಭಾಗವಹಿಸಲು ಅವಕಾಶ ಇರುತ್ತದೆ.
ಹೆಚ್ಚಿನ ಮಾಹಿತಿಗಾಗಿ ಎಂ.ಜಾಕೀರ್-9036335986, ಮಹ್ಮದ್ ಮಸೂದ್-9886688858 ಮತ್ತು ಕಚೇರಿ ಸಿಬ್ಬಂದಿ ರತಿಕಾಂತ್-8971238689 ಗೆ ಸಂಪರ್ಕಿಸಬಹುದು ಎಂದು ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ಕೆ.ಗ್ರೇಸಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

RELATED ARTICLES
- Advertisment -
Google search engine

Most Popular