Tuesday, September 9, 2025
Google search engine

Homeರಾಜ್ಯಗಣತಿದಾರರ ಕೊರತೆಯಾಗದಂತೆ ಕ್ರಮವಹಿಸಿ : ಜಿ ಜಗದೀಶ

ಗಣತಿದಾರರ ಕೊರತೆಯಾಗದಂತೆ ಕ್ರಮವಹಿಸಿ : ಜಿ ಜಗದೀಶ

ಬೆಂಗಳೂರು : ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕೈ ಕೈಗೊಳ್ಳಲು ಗಣಕಿದಾರರ ಸಂಖ್ಯೆ ಕಡಿಮೆ ಇರುವುದರಿಂದ ವಿವಿಧ ಇಲಾಖೆಗಳ ಲಿಪಿಕಾ ಸಿಬ್ಬಂದಿ, ಶಿಕ್ಷಕರು, ಅಂಗನವಾಡಿ ಕಾರ್ಯಕರ್ತರು, ಗ್ರಾಮ ಲೆಕ್ಕಿಗರು, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳನ್ನು ನೇಮಿಸಬೇಕಾಗಿದ್ದು, ಅದಕ್ಕಾಗಿ, ಸಿಬ್ಬಂದಿ ಪಟ್ಟಿಯನ್ನು ಒದಗಿಸುವಂತೆ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಗೆ ಬೆಂಗಳೂರು ನಗರ ಜಿಲ್ಲಾಧಿಕಾರಿಗಳು ಸೂಚಿಸಿದರು.

ಇಂದು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸಮೀಕ್ಷೆ ಕಾರ್ಯದಲ್ಲಿ ಮೇಲ್ವಿಚಾರಕರ ಕೊರತೆ ಯಾಗದಂತೆ ಹೆಚ್ಚುವರಿ ಮೇಲ್ವಿಚಾರಕರ ಪಟ್ಟಿಯನ್ನು ಸಿದ್ಧಪಡಿಸಲು ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರಿಗೆ ಅವರು ಸೂಚಿಸಿದರು.

ಸಮೀಕ್ಷೆ ನಡೆಸಲು ಸೆಪ್ಟಂಬರ್ 10 ರಂದು ಮಾಸ್ಟರ್ ಟ್ರೈನರ್ ಗಳಿಗೆ ಜಿಲ್ಲಾಮಟ್ಟದಲ್ಲಿ ತರಬೇತಿ ಆಯೋಜಿಸಿದ್ದು, ಸೆಪ್ಟಂಬರ್ 15 ಮತ್ತು 19 ರಂದು ಗಣತಿದಾರರಿಗೆ ತರಬೇತಿಯನ್ನು ಹಮ್ಮಿಕೊಳ್ಳಲಾಗುವುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿ ನಿರುಪಮಾ ಮೌಳಿ ಸಭೆಗೆ ಮಾಹಿತಿ ನೀಡಿದರು.

ಈ ಸಭೆಯಲ್ಲಿ ಬೆಂಗಳೂರು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳಾದ ಯತೀಶ್. ಆರ್. ಅಪರ ಜಿಲ್ಲಾಧಿಕಾರಿಗಳಾದ ಜಗದೀಶ್ ಕೆ ನಾಯಕ್ ಸೇರಿದಂತೆ ಇತರೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular