ಶಿವಮೊಗ್ಗ: ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರವು ತನ್ನ ವ್ಯಾಪ್ತಿಯಲ್ಲಿರುವ ಖಾಸಗಿ ಬಡಾವಣೆಗಳಲ್ಲಿ ಲಭ್ಯವಿರುವ ನಾಗರೀಕ ಸೌಲಭ್ಯ ನಿವೇಶನಗಳನ್ನು 1991ರ ಕರ್ನಾಟಕ ನಗರಾಭಿವೃದ್ಧಿ ಪ್ರಾಧಿಕಾರಗಳ ನಾಗರೀಕ ಸೌಲಭ್ಯ ನಿವೇಶನಗಳ ಹಂಚಿಕೆ ನಿಯಮದನ್ವಯ ಅರ್ಹ ನೊಂದಾಯಿತ ಸಂಘ ಸಂಸ್ಥೆಗಳು /ಕೇಂದ್ರ / ರಾಜ್ಯ / ಅರೆ ಸರ್ಕಾರಿ / ನಿಗಮ ಮಂಡಳಿಗಳಿಂದ ಹಂಚಿಕೆಗಾಗಿ ಜುಲೈ 29ರಂದು ಪ್ರಕಟಣೆಯನ್ನು ಹೊರಡಿಸಲಾಗಿತ್ತು. ಸದರಿ ಪ್ರಕಟಣೆಯಲ್ಲಿ ನಾಗರಿಕ ಸೌಲಭ್ಯ ನಿವೇಶನ ಮಂಜೂರಾತಿ ಅರ್ಜಿ ನಮೂನೆ-1 ಮತ್ತು ನಮೂನೆ-2 ನ್ನು ಪಡೆಯಲು ದಿನಾಂಕ:15-09-2025 ರವರೆಗೆ, ಭರ್ತಿ ಮಾಡಿದ ಅರ್ಜಿಯನ್ನು ಸಲ್ಲಿಸಲು ನಿಗಧಿಪಡಿಸಲಾಗಿದ್ದ ದಿನಾಂಕವನ್ನು ಸಾರ್ವಜನಿಕ ಹಿತದೃಷ್ಟಿಯಿಂದ ದಿನಾಂಕ:17-09-2025 ರವರೆಗೆ ವಿಸ್ತರಿಸಲಾಗಿದೆ.
ಹೆಚ್ಚಿನ ಮಾಹಿತಿಯನ್ನು ಪ್ರಾಧಿಕಾರದ ವೆಬ್‌ಸೈಟ್‌ನಿಂದ ಹಾಗೂ ಕಚೇರಿ ದೂರವಾಣಿ ನಂ. 08182-248887 ನ್ನು ಸಂಪರ್ಕಿಸಿ ಪಡೆಯಬಹುದಾಗಿದೆ ಎಂದು ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರು ತಿಳಿಸಿದ್ದಾರೆ.