ಮಂಡ್ಯ : ಕಳೆದೆರಡು ದಿನಗಳ ಹಿಂದೆ ಮಂಡ್ಯ ಜಿಲ್ಲೆಯ ಮದ್ದೂರು ಪಟ್ಟಣದಲ್ಲಿ ಗಣೇಶ ವಿಸರ್ಜನಾ ವೇಳೆ ಮೆರವಣಿಗೆಯ ಮೇಲೆ ಕಲ್ಲುತೂರಾಟ ನಡೆಸಿದ್ದ ಘಟನೆ ನಡೆದಿತ್ತು. ಇದೀಗ ಇಂದು ಬುಧವಾರ ಮತ್ತೆ ಸಾಮೂಹಿಕ ಗಣೇಶ ವಿಸರ್ಜನ ಕಾರ್ಯಕ್ರಮ ಹಿನ್ನೆಲೆಯಲ್ಲಿ ಮದ್ದೂರು ಪಟ್ಟಣದಾದ್ಯಂತ ಖಾಕಿ ಸರ್ಪಗಾವಲು ಇದೆ. ದಕ್ಷಿಣ ವಲಯದ ಐಜಿಪಿ ಬೋರಲಿಂಗಯ್ಯ ನೇತೃತ್ವದಲ್ಲಿ ಬಿಗಿ ಭದ್ರತೆ ಒದಗಿಸಲಾಗಿದೆ.
ಭದ್ರತೆಗೆ 5 ಮಂದಿ ಎಸ್ಪಿ, 4 ಮಂದಿ ಎಎಸ್ಪಿ ಸೇರಿದಂತೆ ಸಾವಿರಾರು ಪೊಲೀಸರು ಭದ್ರತೆಗೆ ನಿಯೋಜನೆ ಮಾಡಲಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಎಚ್ಚರಿಕೆ ವಹಿಸಲಾಗಿದೆ. ಮಂಡ್ಯ, ಮೈಸೂರು, ಬೆಂಗಳೂರು, ರಾಮನಗರ, ಚಾಮರಾಜನಗರ, ಹಾಸನ ಸೇರಿ ಹಲವು ಜಿಲ್ಲೆಗಳ ಪೊಲೀಸರ ನಿಯೋಜನೆಗೊಳಿಸಿದ್ದು, ಕೆಎಸ್ಆರ್‌ಪಿ, ಡಿಎಆರ್ ತುಕಡಿ, ರ್ಯಾಪಿಡ್ ಆ್ಯಕ್ಷನ್ ಪೋರ್ಸ್ ಸೇರಿ 2 ಸಾವಿರ ಪೊಲೀಸ್ ಸಿಬ್ಬಂದಿಗಳ ನಿಯೋಜನೆ ಮಾಡಲಾಗಿದೆ.
ಇಂದು ಮದ್ದೂರಿನಲ್ಲಿ ಇಲ್ಲ ನಿಷೇಧಾಜ್ಞೆ: ಮದ್ದೂರು, ಮಳವಳ್ಳಿ, ಮಂಡ್ಯ ತಾಲೂಕಿನಲ್ಲಿ ಇಂದು ಮದ್ಯ ಮಾರಾಟ, ಸಾಗಾಣಿಕೆಗೆ ಸಂಪೂರ್ಣ ಬ್ರೇಕ್ ಹಾಕಲಾಗಿದ್ದು, ಕಳೆದ ಎರಡು ದಿನಗಳ ಹಿಂದೆ ಗಣೇಶ ಮೆರವಣಿಗೆ ಮೇಲೆ ಕಲ್ಲುತೂರಾಟ ನಡೆಸಿದ್ದರ ಹಿನ್ನೆಲೆ ನಿಷೇಧಾಜ್ಞೆ ಜಾರಿಗೊಳಿಸಲಾಗಿತ್ತು. ಅದರ ನಡುವೆಯೂ ಕೂಡ ಹಿಂದೂ ಸಂಘಟನೆಯ ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಿದರು. ಆದರೆ ಇಂದು ಸಾಮೂಹಿಕ ಗಣೇಶ ವಿಸರ್ಜನೆ ಹಿನ್ನೆಲೆಯಲ್ಲಿ ಮಧುರ ಪಟ್ಟಣದಲ್ಲಿ ಯಾವುದೇ ನಿಷೇಧಾಜ್ಞೆ ಜಾರಿಗೊಳಿಸಿಲ್ಲ ಎಂದು ತಿಳಿದುಬಂದಿದೆ.