ಮಂಗಳೂರು (ದಕ್ಷಿಣ ಕನ್ನಡ) : ಗುಂಡಿಗಳಿಂದಾಗಿ ಹಲವು ಮಂದಿ ದ್ವಿಚಕ್ರ ವಾಹನಗಳ ಸವಾರರ ಸಾವಿಗೆ ಕಾರಣವಾಗಿರುವ ರಾಷ್ಟ್ರೀಯ ಹೆದ್ದಾರಿ 66ನ್ನು ದುರಸ್ತಿ ಮಾಡದಿರುವ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಧೋರಣೆಯನ್ನು ಖಂಡಿಸಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ ನೇತೃತ್ವದಲ್ಲಿ ಸೆ.12ರಂದು ಬೆಳಗ್ಗೆ ಮಂಗಳೂರಿನ ನಂತೂರಿನಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ಕಾಂಗ್ರೆಸ್ ಸಮಿತಿ ಅಧ್ಯಕ್ಷ ಕೆ. ಹರೀಶ್ ಕುಮಾರ್ ತಿಳಿಸಿದ್ದಾರೆ.
ಮಂಗಳೂರಿನ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರತಿಭಟನೆಯ ಬಳಿಕ ರಸ್ತೆ ದುರಸ್ತಿಗೆ ಆಗ್ರಹಿಸಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಕಚೇರಿಗೆ ತೆರಳಿ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಗುವುದು ಎಂದರು. ಎರಡು ದಿನಗಳ ಹಿಂದೆ ದ್ವಿಚಕ್ರ ವಾಹನ ರಾಷ್ಟ್ರೀಯ ಹೆದ್ದಾರಿಯಲ್ಲಿನ ಗುಂಡಿಗೆ ಬಿದ್ದು ಮಾಧವಿ ಎಂಬವರು ಮೃತಪಟ್ಟಿದ್ದಾರೆ. ಆದರೆ ಅವರಿಗೆ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಬಿಜೆಪಿ ನಾಯಕರು ಧ್ವನಿಯೆತ್ತಿಲ್ಲ ಏಕೆ?. ಹಿಂದೂ ಮಹಿಳೆ ಅಪಘಾತದಲ್ಲಿ ಮೃತಪಟ್ಟಿದ್ದರೂ ಆಕೆಗೆ ನ್ಯಾಯ ದೊರಕಿಸಲು ಬಿಜೆಪಿಯ ರಾಜ್ಯ ವಿಪಕ್ಷ ನಾಯಕ ಆರ್. ಅಶೋಕ್ , ರಾಜ್ಯಾಧ್ಯಕ್ಷ ವಿಜಯೇಂದ್ರ, ಪಕ್ಷದ ನಾಯಕರಾದ ಸಿ.ಟಿ.ರವಿ, ನಾರಾಯಣ ಸ್ವಾಮಿ ಯಾಕೆ ಬಂದಿಲ್ಲ ಎಂದು ಹರೀಶ್ ಕುಮಾರ್ ಪ್ರಶ್ನಿಸಿದರು.
ಬೈಟ್: