ಹಾಸನ : ನಿನ್ನೆ ಹಾಸನ ತಾಲೂಕಿನ ಮೊಸಳೆ ಹೊಸಳ್ಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಗಣೇಶ ಮೆರವಣಿಗೆಯ ವೇಳೆ ಕ್ಯಾಂಟರ್ ಹರಿದು ಭೀಕರ ಬಹಾರ ಸಂಭವಿಸಿದ್ದು ಅಪಘಾತದಲ್ಲಿ 9 ಜನರು ಸಾವನ್ನಪ್ಪಿದ್ದು 20 ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ಈ ಒಂದು ಘಟನೆಗೆ ಸಂಬಂಧಿಸಿದಂತೆ ಇದೀಗ ಪ್ರಧಾನ ಮಂತ್ರಿ ನರೇಂದ್ರ ಮೋದಿ ಸಹ ಸಂತಾಪ ಸೂಚಿಸಿದ್ದು, ಇದೊಂದು ಹೃದಯವಿದ್ರಾವಕ ಘಟನೆ ಮೃತರ ಆತ್ಮಕ್ಕೆ ಶಾಂತಿ ಕೋರಿ ಪ್ರದಾನ ಮಂತ್ರಿ ನರೇಂದ್ರ ಮೋದಿ ಎಕ್ಸ್ ನಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ. ಮೃತ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ. ದುರಂತಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಆಘಾತ ವ್ಯಕ್ತಪಡಿಸಿದ್ದು ಮೃತರ ಕುಟುಂಬಸ್ಥರಿಗೆ ತಲಾ 2 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಿದ್ದಾರೆ. ಗಾಯಾಳುಗಳಿಗೆ 50,000 ಘೋಷಣೆ ಮಾಡಿದ್ದಾರೆ. ಪಿಎಂ ರಾಷ್ಟೀಯ ಪರಿಹಾರ ನಿಧಿಯಿಂದ ಪರಿಹಾರ ಘೋಷಣೆ ಮಾಡಲಾಗಿದೆ. ಇನ್ನು ರಾಜ್ಯ ಸರ್ಕಾರದಿಂದ ಮೃತ ಕುಟುಂಬಸ್ಥರಿಗೆ 5 ಲಕ್ಷ ಪರಿಹಾರ ಘೋಷಣೆ ಮಾಡಿದೆ.