Sunday, September 14, 2025
Google search engine

Homeಸ್ಥಳೀಯಮೈಸೂರು ದಸರಾ 2025: ಯದುವಂಶದ ಪ್ರಮೋದಾ ದೇವಿ ಒಡೆಯರ್ ಅವರಿಗೆ ಅಧಿಕೃತ ಆಹ್ವಾನ

ಮೈಸೂರು ದಸರಾ 2025: ಯದುವಂಶದ ಪ್ರಮೋದಾ ದೇವಿ ಒಡೆಯರ್ ಅವರಿಗೆ ಅಧಿಕೃತ ಆಹ್ವಾನ

ಮೈಸೂರು: ನಾಡು ಕಾದಿರುವ ವಿಶ್ವಪ್ರಸಿದ್ಧ ಮೈಸೂರು ದಸರಾ ಮಹೋತ್ಸವಕ್ಕೆ ಈ ಬಾರಿ ಅಧಿಕೃತವಾಗಿ ಯದುವಂಶದ ರಾಜಮಾತೆ ಪ್ರಮೋದಾ ದೇವಿ ಒಡೆಯರ್ ಅವರಿಗೆ ಆಹ್ವಾನ ನೀಡಲಾಗಿದೆ. ಮೈಸೂರು ಜಿಲ್ಲೆಯ ಉಸ್ತುವಾರಿ ಸಚಿವ ಹೆಚ್.ಸಿ. ಮಹದೇವಪ್ಪ ಅವರು ಇಂದು ಅರಮನೆಗೆ ಭೇಟಿ ನೀಡಿ ಗೌರವ ಧನ ನೀಡಿ ಈ ಆಹ್ವಾನವನ್ನು ಸಲ್ಲಿಸಿದರು.

ಸೆಪ್ಟೆಂಬರ್ 22ರಿಂದ ಆರಂಭವಾಗಲಿರುವ ಮೈಸೂರು ದಸರಾ – 2025 ನಾಡಹಬ್ಬಕ್ಕೆ ಮೈಸೂರಿನ ಅರಮನೆಯ ರಾಜವಂಶದವರನ್ನು ಗೌರವಪೂರ್ವಕವಾಗಿ ಆಹ್ವಾನಿಸುವ ಸಂಪ್ರದಾಯ ಅನೇಕ ದಶಕಗಳಿಂದ ನಡೆದು ಬರುತ್ತಿದ್ದು, ಈ ವರ್ಷವೂ ಅದೇ ಪರಂಪರೆಯ ಪಾಲನೆಯಾಗಿದೆ.

ಈ ಸಂದರ್ಭದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಉಪಾಧ್ಯಕ್ಷೆ ಡಾ ಪುಷ್ಪಾ ಅಮರ್ ನಾಥ್, ಜಿಲ್ಲಾಧಿಕಾರಿಗಳಾದ ಜಿ. ಲಕ್ಷ್ಮೀ ಕಾಂತ ರೆಡ್ಡಿ, ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಸ್ .ಯುಕೇಶ್ ಕುಮಾರ್ , ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್, ಅಪರ ಜಿಲ್ಲಾಧಿಕಾರಿ ಡಾ. ಪಿ.ಶಿವರಾಜು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular