Tuesday, September 16, 2025
Google search engine

Homeಸ್ಥಳೀಯಮೈಸೂರು ಅರಮನೆಗೆ ಇಂದು ಮಧ್ಯಾಹ್ನ 1 ಗಂಟೆಯವರೆಗೆ ಪ್ರವೇಶ ನಿರ್ಬಂಧ

ಮೈಸೂರು ಅರಮನೆಗೆ ಇಂದು ಮಧ್ಯಾಹ್ನ 1 ಗಂಟೆಯವರೆಗೆ ಪ್ರವೇಶ ನಿರ್ಬಂಧ

ಮೈಸೂರು : ಸೆಪ್ಟೆಂಬರ್ 22ರಿಂದ ವಿಶ್ವವಿಖ್ಯಾತ ಮೈಸೂರು ದಸರಾ ಮಹತೋತ್ಸವ ನಡೆಯಲಿದ್ದು, ಸಿಂಹಾಸನ ಜೋಡಣೆ ಹಿನ್ನೆಲೆಯಲ್ಲಿ ಇಂದು ಮಧ್ಯಾಹ್ನ 1 ಗಂಟೆವರೆಗೆ ಮೈಸೂರು ಅರಮನೆಗೆ ಪ್ರವೇಶ ನಿರ್ಬಂಧಿಸಲಾಗಿದೆ.

ಸಿಂಹಾಸನ ಜೋಡಣೆ ಕಾರ್ಯ ನಡೆಯುವ ಹಿನ್ನೆಲೆ ಮೈಸೂರಿನ ಅರಮನೆಗೆ ಮಧ್ಯಾಹ್ನ 1 ಗಂಟೆವರೆಗೆ ಪ್ರವೇಶ ನಿರ್ಬಂಧಿಸಲಾಗಿದೆ. ಪ್ರಮೋದಾ ದೇವಿ ಒಡೆಯರ್ ನೇತೃತ್ವದಲ್ಲಿ ಸಿಂಹಾಸನ ಜೋಡಣೆ ಕಾರ್ಯ ನೆರವೇರಲಿದೆ. ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಸಾಂಸ್ಕ್ರತಿಕ ನಗರಿ ಮೈಸೂರು ಸಜ್ಜಾಗಿದೆ.

2025ನೇ ಸಾಲಿನ ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವವನ್ನು ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 2 ರವರೆಗೆ ವಿಜೃಂಭಣೆಯಿಂದ ಆಚರಿಸಲಾಗುತ್ತದೆ. ಹೀಗಾಗಿ ಈಗಾಗಲೇ ಅರಮನೆಯಲ್ಲಿ ಸಕಲ ಸಿದ್ಧತೆಗಳು ಸಹ ನಡೆದಿದ್ದು, ಇದೀಗ ಈ ಬಾರಿಯ ಮೈಸೂರು ದಸರಾ ವೀಕ್ಷಣೆಗೆ ಟಿಕೆಟ್ ಮತ್ತು ಗೋಲ್ಡ್ ಕಾರ್ಡ್‌ಗಳನ್ನು ಸಾರ್ವಜನಿಕ ಬಳಕೆಗೆ ಜಿಲ್ಲಾಡಳಿತವು ದಸರಾ ಅಧಿಕೃತ ವೆಬ್ ಸೈಟ್‌ನಲ್ಲಿ ಬಿಡುಗಡೆಗೊಳಿಸಿದೆ.

ಹೌದು.. ಈ ಬಾರಿಯ ಮೈಸೂರು ದಸರಾ ಹಬ್ಬದಲ್ಲಿ ಅರಮನೆ, ಜಂಬೂಸವಾರಿ, ಪಂಜಿನ ಕವಾಯತು, ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಹೀಗೆ ಎಲ್ಲವನ್ನೂ ಕಣ್ತುಂಬಿಕೊಳ್ಳಬೇಕು ಎನ್ನುವವರಿಗೆ ಜಿಲ್ಲಾಡಳಿತ, 6500 ರೂಪಾಯಿ ಗೋಲ್ಡ್‌ ಕಾರ್ಡ್‌, ಟಿಕೆಟ್‌ ಗಳನ್ನು ಬಿಡುಗಡೆ ಮಾಡಿದೆ. ಸೆ.22 ರಿಂದ ಅ.2 ರವರೆಗೆ ನಡೆಯಲಿರುವ ದಸರಾದಲ್ಲಿ ಗೋಲ್ಡ್‌ ಕಾರ್ಡ್‌ ಪಡೆದು ಎಲ್ಲ ಕಾರ್ಯಕ್ರಮಗಳನ್ನು ನೋಡಬಹುದಾಗಿದೆ.

ದಸರಾ ಗೋಲ್ಡ್ ಕಾರ್ಡ್ ಗೆ 6500 ರೂಪಾಯಿ ನಿಗದಿ ಮಾಡಲಾಗಿದೆ. ಇನ್ನು ಮೈಸೂರು ದಸರಾದ ಪ್ರಮುಖ ಆಕರ್ಷಣೆಯಾಗಿರುವ ಜಂಬೂಸವಾರಿ ಟಿಕೆಟ್ 3500 ಹಾಗೂ ಪಂಜಿನ ಕವಾಯತು ಟಿಕೆಟ್‌ಗೆ 1500 ರೂಪಾಯಿ ನಿಗದಿ ಮಾಡಲಾಗಿದ್ದು, ಆನ್​​ಲೈನ್​ ಮೂಲಕ ಸಹ ಪಡೆಯಬಹುದಾಗಿದೆ. ಸಾರ್ವಜನಿಕರಿಗೆ ದಸರಾ ಗೋಲ್ಡ್‌ ಕಾರ್ಡ್ ಮತ್ತು ಟಿಕೆಟ್‌ಗಳನ್ನು ಮೈಸೂರು ದಸರಾ ಅಧಿಕೃತ ಜಾಲತಾಣ https://mysoredasara.gov.in/ ಮೂಲಕ ಖರೀದಿಸಬಹುದಾಗಿದೆ.

https://mysoredasara.gov.in/ ಅಧಿಕೃತ ಜಾಲತಾಣದಲ್ಲಿ ಶನಿವಾರ ಮಧ್ಯಾಹ್ನ 3ರಿಂದಲೇ ಆನ್​​ ಲೈನ್​​ ನಲ್ಲಿ ಖರೀದಿಗೆ ಲಭ್ಯ ಇದೆ ಎಂದು ಜಿಲ್ಲಾಧಿಕಾರಿ ಜಿ. ಲಕ್ಷ್ಮೀಕಾಂತರೆಡ್ಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಗೋಲ್ಡ್​ ಕಾರ್ಡ್​ ಖರೀದಿಸಿರುವವರೆಗೆ(ಒಂದಕ್ಕೆ 6500) ಚಾಮರಾಜೇಂದ್ರ ಮೃಗಾಲಯ, ಚಾಮುಂಡಿ ಬೆಟ್ಟ(ವಿಶೇಷ ದರ್ಶನಕ್ಕೆ), ಮೈಸೂರು ಅರಮನೆಗೆ ಒಂದು ಬಾರಿ ಉಚಿತವಾಗಿ ಪ್ರವೇಶ ದೊರೆಯಲಿದೆ. ಡ್ರೋನ್ ಶೋ, ಜಂಬೂಸವಾರಿ ಹಾಗೂ ಪಂಜಿನ ಕವಾಯಿತು ವೀಕ್ಷಣೆಗೆ ಪ್ರತ್ಯೇಕವಾಗಿ ಆಸನಗಳನ್ನು ವ್ಯವಸ್ಥೆ ಮಾಡಲಾಗುವುದು ಎಂದು ಜಿಲ್ಲಾಡಳಿತ ತಿಳಿಸಿದೆ.

RELATED ARTICLES
- Advertisment -
Google search engine

Most Popular