Tuesday, September 16, 2025
Google search engine

Homeರಾಜ್ಯಸಂವಿಧಾನದ ವಿರುದ್ಧ ಪಿತೂರಿ ನಡೆದಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಖಡಕ್ ಎಚ್ಚರಿಕೆ

ಸಂವಿಧಾನದ ವಿರುದ್ಧ ಪಿತೂರಿ ನಡೆದಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಖಡಕ್ ಎಚ್ಚರಿಕೆ

ವರದಿ: ಸ್ಟೀಫನ್ ಜೇಮ್ಸ್

ಬೆಂಗಳೂರು: ಒಬ್ಬ ವ್ಯಕ್ತಿ, ಒಂದು ಮತ, ಒಂದು ಮೌಲ್ಯ ಎಂಬ ಡಾ. ಬಿ.ಆರ್. ಅಂಬೇಡ್ಕರ್ ಅವರ ತತ್ವವನ್ನು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ. ಸಂವಿಧಾನವನ್ನು ದುರ್ಬಲಗೊಳಿಸಲು ಶಕ್ತಿಗಳು ಪಿತೂರಿ ನಡೆಸುತ್ತಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಮತಗಳ್ಳತನದ ಮೂಲಕ ಪ್ರಜಾಪ್ರಭುತ್ವವನ್ನು ಹಾಳು ಮಾಡಲಾಗುತ್ತಿದೆ ಎಂಬ ಗಂಭೀರ ಆರೋಪವನ್ನು ಅವರು ಮಾಡಿದ್ದಾರೆ.

ಸೋಮವಾರ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಆಯೋಜಿಸಿದ್ದ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದ್ದಾರೆ. ಬಿಜೆಪಿ ಬಗ್ಗೆ ತೀವ್ರ ವಾಗ್ದಾಳಿ ನಡೆಸಿದರು. ಕೇಂದ್ರದಲ್ಲಿ ಅಧಿಕಾರ ಉಳಿಸಿಕೊಳ್ಳಲು ಬಿಜೆಪಿ ಮತಗಳ್ಳತನಕ್ಕೆ ಕೈಹಾಕುತ್ತಿದೆ. ಇದು ಪ್ರಜಾಪ್ರಭುತ್ವಕ್ಕೆ ಗಂಭೀರ ಹಾನಿಯಾಗಿದೆ. ಪ್ರಜಾಪ್ರಭುತ್ವವನ್ನ ರಕ್ಷಿಸುವ ಜವಾಬ್ದಾರಿ ಪ್ರತಿಯೊಬ್ಬ ನಾಗರಿಕನ ಮೇಲಿದೆ ಎಂದು ಹೇಳಿದರು.

ಇಂತಹ ಸಂದರ್ಭದಲ್ಲೇ ‘ನನ್ನ ಮತ, ನನ್ನ ಹಕ್ಕು’ ಎಂಬ ಘೋಷಣೆಯ ಮಹತ್ವ ಹೆಚ್ಚಾಗಿದೆ. ಮತದಾನ ಪ್ರಕ್ರಿಯೆ ಶುದ್ಧವಾಗಿರಬೇಕು. ಮತಗಳ ದುರುಪಯೋಗವಾಗಬಾರದು. ಮತಗಳ್ಳತನಕ್ಕೆ ಅವಕಾಶ ನೀಡಬಾರದು ಎಂದು ಸಿಎಂ ಎಚ್ಚರಿಸಿದರು.

ಸಾಹಿತಿ ಬಾನು ಮುಷ್ತಾಕ್ ಅವರು ಅನ್ಯಧರ್ಮದವರೆಂಬ ಕಾರಣಕ್ಕೆ ದಸರಾ ಉದ್ಘಾಟಿಸಬಾರದೆಂದು ವಿರೋಧ ವ್ಯಕ್ತಪಡಿಸಲಾಗುತ್ತಿದೆ. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಖಂಡಿಸಿದರು. ಅವರ ಧರ್ಮವನ್ನು ಆಧರಿಸಿ ವಿರೋಧಿಸುವುದು ಸಂವಿಧಾನ ಬೋಧನೆಯ ವಿರುದ್ಧವಾಗಿದೆ. ಜಾತಿ, ಧರ್ಮ, ವರ್ಗ ಮೀರಿ ಎಲ್ಲರೂ ಸಮಾನರು ಎಂಬುದೇ ಸಂವಿಧಾನದ ಸ್ಪಷ್ಟ ಸಂದೇಶವಾಗಿದೆ ಎಂದು ತಿಳಿಸಿದರು.

RELATED ARTICLES
- Advertisment -
Google search engine

Most Popular