- ಕಾಂಗ್ರೆಸ್ ಸರ್ಕಾರದ ವಿರುದ್ಧ ಕಲ್ಲು-ಮರಳು ಸಮಸ್ಯೆ ಕುರಿತು ಗಂಭೀರ ಆರೋಪ
ಮಂಗಳೂರು (ದಕ್ಷಿಣ ಕನ್ನಡ) : ಕೆಂಪು ಕಲ್ಲು ಮತ್ತು ಮರಳು ಸಮಸ್ಯೆಯನ್ನು ನಿವಾರಿಸಲು ರಾಜ್ಯ ಕಾಂಗ್ರೆಸ್ ಸರಕಾರದ ವೈಫಲ್ಯವಾಗಿದೆ ಎಂದು ಆರೋಪಿಸಿ ಬಿಜೆಪಿ ಪಕ್ಷದ ನೇತೃತ್ವದಲ್ಲಿ ಪ್ರತಿಭಟನಾ ಧರಣಿ ಮಂಗಳೂರು ಮಿನಿ ವಿಧಾನ ಸೌಧದ ಎದುರು ಇಂದು ನಡೆಯಿತು.
ಈ ಪ್ರತಿಭಟನೆಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಶಾಸಕ ವೇದವ್ಯಾಸ ಕಾಮತ್ ಸೇರಿದಂತೆ ಜಿಲ್ಲೆಯ ಬಿಜೆಪಿ ನಾಯಕರು, ಕಾರ್ಯಕರ್ತರು ಭಾಗವಹಿಸಿದ್ದರು. ಇದೇ ವೇಳೆ ‘ಬಾವಾ ಬಂದರೋ’ ಹಾಡಿನ ಶೈಲಿಯಲ್ಲಿ ‘ಗುಂಡೂರಾವ್ ಓಡಿ ಹೋದರು’ ಎಂಬ ಹಾಸ್ಯಸ್ಯದ ಶೈಲಿಯಲ್ಲಿ ಹಾಡನ್ನು ಹಾಡಿ ವಿನೂತನವಾಗಿ ಪ್ರತಿಭಟಿಸಲಾಯಿತು.