Tuesday, September 16, 2025
Google search engine

Homeಅಪರಾಧಕಾನೂನುಮುಡಾ ಹಗರಣ: ಮಾಜಿ ಮುಡಾ ಆಯುಕ್ತ ದಿನೇಶ್ ವಿರುದ್ಧ ತನಿಖೆಗೆ ಸರ್ಕಾರ ಅಸ್ತು

ಮುಡಾ ಹಗರಣ: ಮಾಜಿ ಮುಡಾ ಆಯುಕ್ತ ದಿನೇಶ್ ವಿರುದ್ಧ ತನಿಖೆಗೆ ಸರ್ಕಾರ ಅಸ್ತು

ಮೈಸೂರು: ಮುಡಾ ಹಗರಣ ಅಕ್ರಮ ಸೈಟ್ ಹಂಚಿಕೆ ಆರೋಪ ಹಿನ್ನೆಲೆಯಲ್ಲಿ ಮುಡಾ ಮಾಜಿ ಆಯುಕ್ತ ದಿನೇಶ್‌ ಕುಮಾರ್ ವಿರುದ್ಧ ತನಿಖೆ ನಡೆಸಲು ರಾಜ್ಯ ಸರ್ಕಾರ ಸಮ್ಮತಿ ನೀಡಿದೆ.

ಮುಡಾದ ಮಾಜಿ ಅಧ್ಯಕ್ಷ ಹೆಚ್.ವಿ. ರಾಜೀವ್ ಮತ್ತು ದಿನೇಶ್ ವಿರುದ್ಧ ತನಿಖೆ ನಡೆಸಲು ಅನುಮತಿ ನೀಡುವಂತೆ ಲೋಕಾಯುಕ್ತ ಪೊಲೀಸರು ಪ್ರಾಸಿಕ್ಯೂಷನ್ ಅನುಮತಿ ಕೋರಿದ್ದರು. ಆದರೆ ಇದೀಗ ರಾಜ್ಯ ಸರ್ಕಾರ ದಿನೇಶ್ ಕುಮಾರ್ ವಿರುದ್ಧ ಮಾತ್ರ ತನಿಖೆಗೆ ಒಪ್ಪಿಗೆ ನೀಡಿದೆ. ಇನ್ನು ಈಗಾಗಲೇ ಇ.ಡಿ ಅಧಿಕಾರಿಗಳು ದಿನೇಶ್ ಅವರ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಂಡಿದೆ.

ಸಿಎಂ ಸಿದ್ದರಾಮಯ್ಯ ವಿರುದ್ಧ ಮುಡಾ ಪ್ರಕರಣದ ತನಿಖೆ ತಡವಾಗಿದ್ದಕ್ಕೆ ಅಸಮಾಧಾನ ಹೊರಹಾಕಿರುವ ಕೋರ್ಟ್, 6 ತಿಂಗಳಿಂದ ತನಿಖೆಯಲ್ಲಿ ಯಾವುದೇ ಪ್ರಗತಿ ಕಂಡಿಲ್ಲ. ಪ್ರಾಸಿಕ್ಯೂಷನ್ ಅನುಮತಿ ಎಂದು ತಡವಾಗುತ್ತಿದೆ ಎಂದು ಕಿಡಿಕಾರಿದೆ.
ಇತ್ತ ಸ್ನೇಹಮಯಿ ಕೃಷ್ಣ ಅವರು ಲೋಕಾಯುಕ್ತ ಪೊಲೀಸರ ನಡೆಯಿಂದ ಸಮಾಜದಲ್ಲಿ ನಾನು ಅವಮಾನ ಎದುರಿಸುತ್ತಿದ್ದೇನೆ. ಮಾನಸಿಕವಾಗಿ ಕುಗ್ಗಿದ್ದೇನೆ. ಇದರಿಂದ ಬೇಗ ತನಿಖೆಗೆ ಆದೇಶಿಸಿ ಎಂದು ಕೋರ್ಟ್‍ಗೆ ಮನವಿ ಸಲ್ಲಿಸಿದ್ದಾರೆ. ಈ ವೇಳೆ, ಹೆಚ್.ವಿ ರಾಜೀವ್ ವಿರುದ್ಧ ಪ್ರಾಸಿಕ್ಯೂಷನ್ ಅನುಮತಿ ಬೇಕಿಲ್ಲ ಎಂದು ಸ್ನೇಹಮಯಿ ಕೃಷ್ಣ ಪರ ವಕೀಲರು ವಾದಿಸಿದ್ದು, ವಿಚಾರಣೆಯನ್ನ ಕೋರ್ಟ್ ಸೆಪ್ಟಂಬರ್ 29ಕ್ಕೆ ಮುಂದೂಡಿಕೆ ಮಾಡಿದೆ.

RELATED ARTICLES
- Advertisment -
Google search engine

Most Popular