Wednesday, September 17, 2025
Google search engine

Homeರಾಜ್ಯಸುದ್ದಿಜಾಲಕಲ್ಯಾಣ ಕರ್ನಾಟಕ ಉತ್ಸವದ ಸಂಭ್ರಮ : ಸಿಎಂ ಸಿದ್ದರಾಮಯ್ಯ ಧ್ವಜಾರೋಹಣ ನೆರವೇರಿಸಿ, ಶೈಕ್ಷಣಿಕ ಸುಧಾರಣೆ ಘೋಷಣೆ

ಕಲ್ಯಾಣ ಕರ್ನಾಟಕ ಉತ್ಸವದ ಸಂಭ್ರಮ : ಸಿಎಂ ಸಿದ್ದರಾಮಯ್ಯ ಧ್ವಜಾರೋಹಣ ನೆರವೇರಿಸಿ, ಶೈಕ್ಷಣಿಕ ಸುಧಾರಣೆ ಘೋಷಣೆ

ಕಲಬುರಗಿ : ಕಲಬುರಗಿಯಲ್ಲಿ ಇಂದು 78ನೇ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಆಚರಿಸಲಾಗುತ್ತಿದ್ದು, ಸಿಎಂ ಸಿದ್ದರಾಮಯ್ಯ ಅವರು ಧ್ವಜಾರೋಹಣ ನೆರವೇರಿಸಿದ್ದಾರೆ.

ಹೈದರಾಬಾದ್-ಕರ್ನಾಟಕ ವಿಮೋಚನಾ ದಿನದ ಅಂಗವಾಗಿ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಆಚರಿಸಲಾಗುತ್ತಿದ್ದು, ಸಿಎಂ ಸಿದ್ದರಾಮಯ್ಯ ಅವರು ಕಲಬುರಗಿ ನಗರದ ಡಿಎಆರ್ ಪೊಲೀಸ್ ಪರೇಡ್ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿದ್ದಾರೆ.

ಕಲ್ಯಾಣ ಕರ್ನಾಟಕದ ಧ್ವಜಾರೋಹಣ ನೆರವೇರಿಸಿದ ಸಿಎಂ ಸಿದ್ದರಾಮಯ್ಯಗೆ ವಿವಿಧ ಪೊಲೀಸ್ ತುಕಡಿಗಳಿಂದ ಗೌರವ ಸಲ್ಲಿಸಲಾಗಿದೆ.

ಸಿಎಂ ಸಿದ್ದರಾಮಯ್ಯ, ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳಲ್ಲಿ ಎಸ್ ಎಸ್ ಎಲ್ ಸಿ ಫಲಿತಾಂಶ ಕುಸಿತ ಕಂಡ ಹಿನ್ನೆಲೆಯಲ್ಲಿ ಖಾಲಿ ಇರುವ 5267 ಶಿಕ್ಷಕರ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗುವುದು, ಕಲ್ಯಾಣ ಕರ್ನಾಟಕ ಭಾಗದಲ್ಲಿ ಶೈಕ್ಷಣಿಕ ಪ್ರಗತಿ ಸಾಧಿಸಲು ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ. ಸಮಾಜ ಕಲ್ಯಾಣ, ಬಿಸಿಎಂ ಇಲಾಖೆ ಹಾಗೂ ಅಲ್ಪಸಂಖ್ಯಾತ ಇಲಾಖೆ ವತಿಯಿಂದ ಹೊಸದಾಗಿ ವಸತಿ ಶಾಲೆ ಹಾಗೂ ವಸತಿ ನಿಲಯಗಳನ್ನು ನಿರ್ಮಿಸಲಾಗುತ್ತಿದೆ ಎಂದರು.

7 ಜಿಲ್ಲೆಗಳಲ್ಲಿ 204 ಕೋಟಿ ರೂ.ವೆಚ್ಚದಲ್ಲಿ ವಸತಿ ಶಾಲೆಗಳ ನಿರ್ಮಾಣ, ಕಲ್ಯಾಣ ಕರ್ನಾಟಕ ಭಾಗದಲ್ಲಿ ಸ್ಪರ್ಧಾತ್ಮಕ ಪರೀಕ್ಷೆ ತಯಾರಿಗೆ ತರಬೇತಿ ಕೇಂದ್ರ, ಕಲಬುರಗಿಯಲ್ಲಿ 100 ಕೋಟಿ ವೆಚ್ಚದಲ್ಲಿ ನಿಮ್ಹಾನ್ಸ್ ಆಸ್ಪತ್ರೆ, ಇಂದಿರಾಗಾಂಧಿ ಮಕ್ಕಳ ಆಸ್ಪತ್ರೆ ನಿರ್ಮಾಣಕ್ಕೆ 220 ಕೋಟಿ ರೂ. ಒದಗಿಸಲಾಗುವುದು ಎಂದು ಹೇಳಿದ್ದಾರೆ.

ಹೈದರಾಬಾದ್-ಕರ್ನಾಟಕ ವಿಮೋಚನಾ ದಿನದ ಅಂಗವಾಗಿ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಆಚರಿಸಲಾಗುತ್ತಿದ್ದು, ಸಿಎಂ ಸಿದ್ದರಾಮಯ್ಯ ಅವರು ಕಲಬುರಗಿ ನಗರದ ಡಿಎಆರ್ ಪೊಲೀಸ್ ಪರೇಡ್ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿದ್ದಾರೆ. ಕಲ್ಯಾಣ ಕರ್ನಾಟಕದ ಧ್ವಜಾರೋಹಣ ನೆರವೇರಿಸಿದ ಸಿಎಂ ಸಿದ್ದರಾಮಯ್ಯಗೆ ವಿವಿಧ ಪೊಲೀಸ್ ತುಕಡಿಗಳಿಂದ ಗೌರವ ಸಲ್ಲಿಸಲಾಗಿದೆ.

RELATED ARTICLES
- Advertisment -
Google search engine

Most Popular