ತುಮಕೂರು: ಕೇಂದ್ರ ಜಲಶಕ್ತಿ ಖಾತೆ ರಾಜ್ಯ ಸಚಿವಹಾಗೂ ತುಮಕೂರು ಲೋಕಸಭಾ ಸದಸ್ಯರಾದ ವಿ. ಸೋಮಣ್ಣ ಅವರ ಅಧ್ಯಕ್ಷತೆಯಲ್ಲಿ, ಇಂದು ತುಮಕೂರು ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಪರಿಶೀಲನಾ ಹಾಗೂ ಸಮಾಲೋಚನಾ ಸಭೆ ನಡೆಸಲಾಯಿತು.
ಈ ಸಭೆಯಲ್ಲಿ ಜಿಲ್ಲೆಯಲ್ಲಿ ನಡೆಯುತ್ತಿರುವ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿವಿಧ ಅಭಿವೃದ್ಧಿ ಯೋಜನೆಗಳ ಪ್ರಗತಿ, ಯೋಜನೆಗಳ ಕಾರ್ಯಕ್ಷಮ ಅನುಷ್ಠಾನ ಮತ್ತು ಸಾರ್ವಜನಿಕರಿಗೆ ಸೌಲಭ್ಯಗಳ ಕುರಿತು ಚರ್ಚೆ ನಡೆಯಿತು.
ಸಭೆಯಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಯೋಜನೆಗಳ ಆರ್ಥಿಕ ಸೌಲಭ್ಯಗಳನ್ನು ಸಾರ್ವಜನಿಕರಿಗೆ ದೊರಕಿಸುವಲ್ಲಿ ಯಾವುದೇ ನಿರ್ಲಕ್ಷತೆ ವಹಿಸದೆ, ತ್ವರಿತವಾಗಿ ಸೌಲಭ್ಯಗಳನ್ನು ದೊರಕಿಸಲು ಸೂಕ್ತ ಕ್ರಮವಹಿಸಲು ಎಲ್ಲಾ ಬ್ಯಾಂಕ್ ಅಧಿಕಾರಿಗಳಿಗೆ ಸೂಚಿಸಲಾಯಿತು. ಸಭೆಯಲ್ಲಿ ಮಾನ್ಯ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ಮಹಾನಗರ ಪಾಲಿಕೆ ಆಯುಕ್ತರು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಸೇರಿದಂತೆ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು, ಭಾಗಿಯಾಗಿದ್ದರು