ಗದಗ : ಗೋವಾ ಸಾರಿಗೆ ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗದಗ ತಾಲೂಕಿನ ಹರ್ಲಾಪುರ ಗ್ರಾಮದಲ್ಲಿ ನಡೆದಿದೆ.
ಮೃತರನ್ನು ಕಾರು ಚಾಲಕ ಈರಣ್ಣ ಉಪ್ಪಾರ, ರವಿ ನೆಲ್ಲೂರು, ಅರ್ಜುನ್ ಎಂದು ಗುರುತಿಸಲಾಗಿದೆ. ವರದಿಯ ಪ್ರಕಾರ, ಗೋವಾ ಕಡೆ ತೆರಳುತ್ತಿದ್ದ ಕಾರು ಎನ್ ಹೆಚ್ 63ರಲ್ಲಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಗುದ್ದಿ ಬಳಿಕ ಎದುರಿನಿಂದ ಗೋವಾ ಸಾರಿಗೆ ಬಸ್ ಗೆ ಡಿಕ್ಕಿ ಹೊಡೆದಿದೆ.
ಡಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ಜಖಂ ಆಗಿದ್ದು, ಘಟನೆಯಲ್ಲಿ ಕಾರು ಚಾಲಕ ಈರಣ್ಣ ಉಪ್ಪಾರ, ರವಿ ನೆಲ್ಲೂರು, ಅರ್ಜುನ್ ಮೃತಪಟ್ಟಿದ್ದಾರೆ, ಇನ್ನು ಕೆಲವರು ಗಾಯಗೊಂಡಿದ್ದಾರೆ ಎಂದು ಹೇಳಲಾಗಿದೆ. ಚಾಲಕನ ಅಜಾಗರೂಕತೆಯಿಂದ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ.
ಸದ್ಯ ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.