ಬೆಂಗಳೂರು : ರಾಜ್ಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ (ಜಾತಿ ಗಣತಿ) ವಿಚಾರವಾಗಿ ಒಕ್ಕಲಿಗ ಸಮುದಾಯದ ಎಲ್ಲಾ ಪಕ್ಷಗಳ ನಾಯಕರು ಇಂದು ಮಹತ್ವದ ಸಭೆ ನಡೆಸಿದ್ದಾರೆ.

ಬೆಂಗಳೂರಿನ ವಿಜಯನಗರದಲ್ಲಿರುವ ಆದಿಚುಂಚನಗಿರಿ ಮಠದಲ್ಲಿ ಈ ಸಭೆ ನಡೆಯಲಿದ್ದು, ಸಮುದಾಯದ ಪ್ರಮುಖ ನಾಯಕರು ಮತ್ತು ಮಠಾಧೀಶರು ಭಾಗವಹಿಸಿದ್ದಾರೆ.
ಸೆಪ್ಟೆಂಬರ್ 22 ರ ಸೋಮವಾರದಿಂದ ರಾಜ್ಯದಲ್ಲಿ ಪ್ರಾರಂಭವಾಗಲಿರುವ ಸಾಮಾಜಿಕ-ಆರ್ಥಿಕ ಸಮೀಕ್ಷೆಯ ಕುರಿತು ಚರ್ಚೆ ನಡೆಸಲಾಗಿದ್ದು, ಸಭೆಯಲ್ಲಿಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ಕೇಂದ್ರ ಸಚಿವ ಎಚ್ಡಿ ಕುಮಾರಸ್ವಾಮಿ, ಬಿಜೆಪಿ ಎಂಎಲ್ಸಿ ಸಿಟಿ ರವಿ ಸೇರಿದಂತೆ ಎಲ್ಲಾ ಪಕ್ಷಗಳ ಒಕ್ಕಲಿಗ ನಾಯಕರು ಭಾಗವಹಿಸಿದ್ದಾರೆ.