ಪಿರಿಯಾಪಟ್ಟಣ : ಪ್ರಧಾನಮಂತ್ರಿ ನರೇಂದ್ರ ಮೋದಿ ಜನ್ಮದಿನದ ಅಂಗವಾಗಿ ಬಿಜೆಪಿ ವತಿಯಿಂದ ತಾಲೂಕಿನ ಬಿಜೆಪಿ ಕಚೇರಿಯಲ್ಲಿ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿತ್ತು.
ಶಿಬಿರವನ್ನು ಉದ್ಘಾಟಿಸಿದ ಬಿಜೆಪಿ ತಾಲೂಕು ಉಪಾಧ್ಯಕ್ಷ ದೇವೇಂದ್ರ ಹೆಚ್.ಸಿ ಮಾತನಾಡಿ ಎಲ್ಲ ದಾನಕ್ಕಿಂತ ರಕ್ತದಾನ ಶ್ರೇಷ್ಠ. ರಕ್ತದಾನದಿಂದ ದೈಹಿಕ ಶಕ್ತಿ ಹೆಚ್ಚಾಗುತ್ತದೆ. ಅಲ್ಲದೆ, ಹೃದಯ ಸಂಬಂಧಿ ಕಾಯಿಲೆ ದೂರವಾಗುತ್ತದೆ, ಪ್ರಧಾನಿ ಮೋದಿ ಅವರು ಭಾರತವನ್ನು ಅಭಿವೃದ್ಧಿ ಹೊಂದಿದ ಭಾರತವನ್ನಾಗಿ ಮಾಡುವುದು ಕನಸನ್ನು ಹೊಂದಿದ್ದು ನಾವೆಲ್ಲರೂ ಅವರೊಂದಿಗೆ ಕೈಜೋಡಿಸಿ ಅವರ ನಾಯಕತ್ವಕ್ಕೆ ಬಲ ನೀಡಬೇಕಾಗಿದೆ ಎಂದರು.
ಮೈಸೂರು ಜಿಲ್ಲಾ ಆಸ್ಪತ್ರೆ ಸಹಯೋಗದೊಂದಿಗೆ ಆಯೋಜಿಸಿದ ರಕ್ತದಾನ ಶಿಬಿರದಲ್ಲಿ 50ಕ್ಕೂ ಹೆಚ್ಚು ಬಿಜೆಪಿ ಕಾರ್ಯಕರ್ತರು ರಕ್ತದಾನ ಮಾಡಿದರು.
ಈ ಸಂದರ್ಭದಲ್ಲಿ ತಾಲೂಕು ಬಿಜೆಪಿ ಅಧ್ಯಕ್ಷ ರಾಜೇಂದ್ರ, ಮಾಜಿ ಶಾಸಕ ಎಚ್. ಸಿ ಬಸವರಾಜು , ನಗರ ಘಟಕದ ಅಧ್ಯಕ್ಷ ರಮೇಶ್, ಮಹಿಳಾ ಘಟಕ ಅಧ್ಯಕ್ಷೆ ಮೀನಾಕ್ಷಿ, ಪ್ರದನ ಕಾರ್ಯದರ್ಶಿ ಚನ್ನಬಸವರಾಜು, ರವಿ, ರಾಜೇಗೌಡ ಎಂ.ಎಂ ಸೇರಿದಂತೆ ಹಲವು ಕಾರ್ಯಕರ್ತರು ಭಾಗವಹಿಸಿದ್ದರು.