Monday, September 22, 2025
Google search engine

Homeಸ್ಥಳೀಯಚಾಮುಂಡಿ ಬೆಟ್ಟದಿಂದ ದಸರಾ 2025ಕ್ಕೆ ಅದ್ದೂರಿ ಚಾಲನೆ: ಸಾಹಿತಿ ಬಾನು ಮುಷ್ತಾಕ್ ಉದ್ಘಾಟನೆ, ಸನ್ಮಾನ

ಚಾಮುಂಡಿ ಬೆಟ್ಟದಿಂದ ದಸರಾ 2025ಕ್ಕೆ ಅದ್ದೂರಿ ಚಾಲನೆ: ಸಾಹಿತಿ ಬಾನು ಮುಷ್ತಾಕ್ ಉದ್ಘಾಟನೆ, ಸನ್ಮಾನ

ಮೈಸೂರು : ನಾಡದೇವತೆ ಚಾಮುಂಡೇಶ್ವರಿ ದೇವಿಗೆ ಪುಷ್ಟಾರ್ಚನೆ ಮಾಡುವ ಮೂಲಕ ವೃಶ್ಚಿಕ ಲಗ್ನದಲ್ಲಿ ಬುಕರ್ ಪ್ರಶಸ್ತಿ ಪುರಸ್ಕೃತ ಸಾಹಿತಿ ಬಾನು ಮುಸ್ತಾಕ್ ಉತ್ಸವಕ್ಕೆ ಚಾಲನೆ ನೀಡಿದ್ದು, ರಾಜ್ಯ ಸರ್ಕಾರದ ಪರವಾಗಿ ಸಾಹಿತಿ ಬಾನು ಮುಷ್ತಾಕ್ ಅವರಿಗೆ ಸನ್ಮಾನಿಸಲಾಗಿದೆ.

ಮೈಸೂರು ದಸರಾ ಉದ್ಘಾಟನೆ ಬಳಿಕ ಸಿಎಂ ಸಿದ್ದರಾಮಯ್ಯ ಅವರು ಸಾಹಿತಿ ಬಾನು ಮುಷ್ತಾಕ್ ಅವರಿಗೆ ಮೈಸೂರು ಪೇಟ ತೊಡಿಸಿ, ಶಾಲು ಹೊದಿಸಿ ಸನ್ಮಾನಿಸಿದ್ದಾರೆ.

ಬಾನು ಮುಷ್ತಾಕ್ ಅವರು ಚಾಮುಂಡಿ ಬೆಟ್ಟದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಬಳಿಕ ಚಾಮುಂಡೇಶ್ವರಿ ವಿಗ್ರಹಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಮೈಸೂರು ದಸರಾ ಉದ್ಘಾಟಿಸಿದ್ದಾರೆ. ವೃಶ್ಚಿಕ ಲಗ್ನದಲ್ಲಿ ಚಾಮುಂಡಿ ಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಿ ಸನ್ನಿಧಿಯಲ್ಲಿ ಬಾನು ಮುಷ್ತಾಕ್ ಅವರು ಈ ಬಾರಿ ದಸರಾ ಮಹೋತ್ಸವಕ್ಕೆ ಚಾಲನೆ ನೀಡಿದ್ದಾರೆ.

ಈ ಬಾರಿಯ ದಸರಾಗೆ ಅರಮನೆ ನಗರಿ ಮೈಸೂರು ನವವಧುವಿನಂತೆ ಸಿಂಗಾರಗೊಂಡು ನಿಂತಿದೆ. ವಿದ್ಯುತ್ ದೀಪಗಳಿಂದ ಅಲಂಕೃತಗೊಂಡ ಬೀದಿಗಳು, ಕಲೆ, ಸಾಹಿತ್ಯ, ಸಂಸ್ಕೃತಿಗಳನ್ನು ನೋಡುಗರಿಗೆ ಉಣಬಡಿಸಲು ಎದುರುನೋಡುತ್ತಿರುವ ವೇದಿಕೆಗಳು, ತಳಿರು ತೋರಣಗಳಿಂದ ಸಿಂಗಾರಗೊಂಡ ಮೈಸೂರು ಅರಮನೆ ಹೀಗೆ ಇಡೀ ನಗರವೇ ಹೊಸರೂಪ ಪಡೆದು ಕಂಗೊಳಿಸುತ್ತಿದೆ.

RELATED ARTICLES
- Advertisment -
Google search engine

Most Popular