ಬೆಂಗಳೂರು : ನಾಡಿನ ಜನತೆಗೆ ಸಿಎಂ ಸಿದ್ದರಾಮಯ್ಯ ದಸರಾ ಹಬ್ಬದ ಶುಭಾಶಯಗಳನ್ನು ಕೋರಿದರು.
ಈ ಕುರಿತು ಟ್ವೀಟ್ ನಲ್ಲಿ ವಿಡಿಯೋ ಬಿಡುಗಡೆ ಮಾಡಿರುವ ಸಿಎಂ ಸಿದ್ದರಾಮಯ್ಯ, ನಾಡಬಂಧುಗಳಿಗೆ ದಸರಾ ಹಬ್ಬದ ಹಾರ್ದಿಕ ಶುಭಾಶಯಗಳು. ಕನ್ನಡ ಮಣ್ಣಿನ ಪಾರಂಪರಿಕ ಹಾಗೂ ಸಾಂಸ್ಕೃತಿಕ ಶ್ರೀಮಂತಿಕೆಯನ್ನು ಸಂಭ್ರಮಿಸುವ ಈ ಹಬ್ಬವು ಸಮಸ್ತರಿಗೂ ಒಳಿತನ್ನು ಹೊತ್ತು ತರಲಿ ಎಂದು ಹಾರೈಸುತ್ತೇನೆ ಎಂದು ಹೇಳಿದರು.