Tuesday, September 23, 2025
Google search engine

Homeಸ್ಥಳೀಯಮೈಸೂರು ದಸರಾ ಸಂಭ್ರಮ: ಮಹಿಳಾ ದಸರಾ, ಕವಿಗೋಷ್ಠಿ ಸೇರಿದಂತೆ ಹಲವು ಕಾರ್ಯಕ್ರಮಗಳಿಗೆ ಇಂದು ಚಾಲನೆ

ಮೈಸೂರು ದಸರಾ ಸಂಭ್ರಮ: ಮಹಿಳಾ ದಸರಾ, ಕವಿಗೋಷ್ಠಿ ಸೇರಿದಂತೆ ಹಲವು ಕಾರ್ಯಕ್ರಮಗಳಿಗೆ ಇಂದು ಚಾಲನೆ

ಮೈಸೂರು : ನಿನ್ನೆ ಚಾಮುಂಡೇಶ್ವರಿ ತಾಯಿಗೆ ಪುಷ್ಪಾರ್ಚನೆ ಸಲ್ಲಿಸಿ ಖ್ಯಾತ ಸಾಹಿತಿ ಬಾನು ಮುಷ್ತಾಕ್ ದಸರಾ ಉದ್ಘಾಟಿಸಿದರು. ಬಳಿಕ ಸಿಎಂ ಸಿದ್ದರಾಮಯ್ಯ ನಿನ್ನೆ ಆಹಾರ ಮಳಿಗೆ ಸೇರಿದಂತೆ ಕುಸ್ತಿ ಪಂದ್ಯಾಟಗಳಿಗೆ ಚಾಲನೆ ನೀಡಿದರು. ಇದೀಗ ಇಂದು ಯುವ ದಸರಾ ಸೇರಿದಂತೆ ಹಲವು ಕಾರ್ಯಕ್ರಮಗಳಿಗೆ ಚಾಲನೆ ನೀಡಲಾಗುತ್ತಿದೆ.

ಮೈಸೂರು ದಸರಾದಲ್ಲಿ ಇಂದು ವಿವಿಧ ಕಾರ್ಯಕ್ರಮಗಳಿಗೆ ಚಾಲನೆ ನೀಡಲಾಗುತ್ತಿದೆ. ಮೈಸೂರು ವಿಶ್ವವಿದ್ಯಾಲಯದಲ್ಲಿ ಪಂಚಕಾವ್ಯದ ಕವಿಗೋಷ್ಠಿ, ಮೈಸೂರು ವಿಶ್ವವಿದ್ಯಾಲಯ ಕನ್ನಡ ಅಧ್ಯಯನಪೀಠದಲ್ಲಿ ಈ ಒಂದು ಕವಿಗೋಷ್ಠಿ ನಡೆಯಲಿದೆ. ಬಳಿಕ ಜೆಕೆ ಮೈದಾನದಲ್ಲಿ ಮಹಿಳಾ ದಸರಾಗೆ ಚಾಲನೆ ನೀಡಲಾಗುತ್ತದೆ.

ಮಹಿಳಾ ದಸರಾವನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಉದ್ಘಾಟಿಸಲಿದ್ದಾರೆ. ಮಧ್ಯಾಹ್ನ 1 ಗಂಟೆಗೆ ಕಲಾಮಂದಿರದಲ್ಲಿ ಮಕ್ಕಳ ದಸರಾಕ್ಕೆ ಚಾಲನೆ ನೀಡಲಾಗುತ್ತಿದೆ ಮಕ್ಕಳ ದಸರಾದಲ್ಲಿ ಸಚಿವ ಮಧು ಬಂಗಾರಪ್ಪ ಸಹ ಭಾಗಿಯಾಗಲಿದ್ದಾರೆ. ಸಂಜೆ 6 ಗಂಟೆಗೆ ಮೈಸೂರಿನಲ್ಲಿ ಯುವ ದಸರ ಉದ್ಘಾಟನೆ ಆಗಲಿದೆ. ಉತ್ತನಹಳ್ಳಿ ಬಳಿ ಮೈದಾನದಲ್ಲಿ ಯುವ ದಸರಾ ಕಾರ್ಯಕ್ರಮ ಉದ್ಘಾಟನೆ ಆಗಲಿದೆ. ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಅವರಿಂದ ಸಂಗೀತ ಕಾರ್ಯಕ್ರಮಗಳು ನಡೆಯಲಿವೆ.

RELATED ARTICLES
- Advertisment -
Google search engine

Most Popular