Tuesday, September 23, 2025
Google search engine

Homeರಾಜ್ಯಚಿತ್ರಮಂದಿರಗಳ ಟಿಕೆಟ್ ದರ ನಿಯಂತ್ರಣದ ಮೇಲೆ ಹೈಕೋರ್ಟ್ ತಡೆಯಾಜ್ಞೆ

ಚಿತ್ರಮಂದಿರಗಳ ಟಿಕೆಟ್ ದರ ನಿಯಂತ್ರಣದ ಮೇಲೆ ಹೈಕೋರ್ಟ್ ತಡೆಯಾಜ್ಞೆ

ಬೆಂಗಳೂರು : ಮಲ್ಟಿಪ್ಲೆಕ್ಸ್‌ ಸೇರಿ ರಾಜ್ಯ ಎಲ್ಲಾ ಚಿತ್ರಮಂದಿರಗಳಲ್ಲಿ ಎಲ್ಲಾ ಭಾಷೆಯ ಚಿತ್ರಗಳ ಪ್ರದರ್ಶನಕ್ಕೆ ತೆರಿಗೆ ಹೊರತುಪಡಿಸಿ ಗರಿಷ್ಠ 200 ರೂ.ಗಳ ಏಕರೂಪ ದರ ನಿಗದಿಪಡಿಸಿದ ರಾಜ್ಯ ಸರ್ಕಾರ ಹೊರಡಿಸಿದ ಆದೇಶಕ್ಕೆ ಮಧ್ಯಂತರ ತಡೆ ನೀಡುವ ಕುರಿತಂತೆ ಮನವಿಯ ವಿಚಾರಣೆ ಪೂರ್ಣಗೊಳಿಸಿರುವ ಹೈಕೋರ್ಟ್​ ಏಕ ಸದಸ್ಯ ಪೀಠ ಇಂದು ಈ ಕುರಿತು ಮಧ್ಯಂತರ ತಡೆಯಾಜ್ಞೆ ನೀಡಿ ಆದೇಶ ಹೊರಡಿಸಿದೆ.

ಮಲ್ಟಿಪ್ಲೆಕ್ಸ್ ಗಳಲ್ಲಿ ರಾಜ್ಯ ಸರ್ಕಾರ 200 ರೂಪಾಯಿ ಟಿಕೆಟ್ ದರ ನಿಗದಿ ಮಾಡಿತ್ತು. ಇದೀಗ ರಾಜ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಮಲ್ಟಿಪ್ಲೆಕ್ಸ್​ ಅಸೋಸಿಯೇಷನ್‌ ಆಫ್‌ ಇಂಡಿಯಾ, ಹೊಂಬಾಳೆ ಫಿಲಂನ ವಿಜಯ್‌ ಕಿರಗಂದೂರು, ಪಿವಿಆರ್‌ ಐನಾಕ್‌ಸ್‌ ಲಿಮಿಟೆಡ್‌, ವಿಕೆ ಫಿಲಂಸ್‌, ಕೀ ಸ್ಟೋನ್‌ ಎಂಟರ್‌ಟೇನ್ಮೆಂಟ್‌ ಪ್ರವೈಟ್‌ ಲಿಮಿಟೆಡ್‌ ಮತ್ತಿತರರು ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ರವಿ ಹೊಸಮನಿ ಅವರಿದ್ದ ಏಕಸದಸ್ಯಪೀಠ ಈ ಆದೇಶ ನೀಡಿದೆ.

RELATED ARTICLES
- Advertisment -
Google search engine

Most Popular