Thursday, September 25, 2025
Google search engine

Homeಸ್ಥಳೀಯಸರಸ್ವತಿ ಪುತ್ರ ಎಸ್ಎಲ್ ಭೈರಪ್ಪನಿಗೆ ಅಂತಿಮ ನಮನ: ಮೈಸೂರಿನಲ್ಲಿ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ

ಸರಸ್ವತಿ ಪುತ್ರ ಎಸ್ಎಲ್ ಭೈರಪ್ಪನಿಗೆ ಅಂತಿಮ ನಮನ: ಮೈಸೂರಿನಲ್ಲಿ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ

ವರದಿ: ಸ್ಟೀಫನ್ ಜೇಮ್ಸ್

ಮೈಸೂರು: ಸರಸ್ವತಿ ಪುತ್ರ ಎಸ್‌.ಎಲ್ ಭೈರಪ್ಪ ಅವರ ಪಾರ್ಥಿವ ಶರೀರವನ್ನು ಮೈಸೂರು ಕಲಾಮಂದಿರದ ಮುಂಭಾಗ ಸಾರ್ವಜನಿಕರ ದರ್ಶನಕ್ಕೆ ಇಡಲಾಗುತ್ತದೆ. ಇಂದು ಸಂಜೆ 6 ಗಂಟೆವರೆಗೆ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.

ಕನ್ನಡದ ಹಿರಿಯ ಸಾಹಿತಿ, ಕಾದಂಬರಿಗಳಲ್ಲೇ ಯುವಜನತೆಯನ್ನು ಸೆಳೆಯುತ್ತಿದ್ದ ಸರಸ್ವತಿ ಪುತ್ರ ಎಸ್‌.ಎಲ್ ಭೈರಪ್ಪ ಅವರು ನಿಧನರಾಗಿದ್ದಾರೆ. ಭೈರಪ್ಪನವರ ಕೊನೆಯುಸಿರು ಕನ್ನಡ ಸಾಹಿತ್ಯ ಲೋಕಕ್ಕೆ ಶೋಕದಲ್ಲಿ ಮುಳುಗುವಂತೆ ಮಾಡಿದೆ. ಕಾದಂಬರಿಗಳ ಓದುಗರು ನೀರವ ಮೌನಕ್ಕೆ ಜಾರಿದ್ದಾರೆ. ಅಗಲಿದ ಎಸ್‌.ಎಲ್ ಭೈರಪ್ಪನವರಿಗೆ ಭಾವಪೂರ್ಣ ನಮನ ಸಲ್ಲಿಸಲಾಗುತ್ತಿದೆ.

ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಭೈರಪ್ಪನವರ ಅಂತಿಮ ದರ್ಶನ ಪಡೆಯಲು ಅವಕಾಶ ಕಲ್ಪಿಸಲಾಗಿತ್ತು. ಸಾಹಿತ್ಯ ಲೋಕದ ಹಲವು ಗಣ್ಯರು ಗೌರವ ನಮನ ಸಲ್ಲಿಸಿದರು. ಸಿಎಂ ಸಿದ್ದರಾಮಯ್ಯ, ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ, ಡಿಸಿಎಂ ಡಿ.ಕೆ ಶಿವಕುಮಾರ್ ಸೇರಿದಂತೆ ಹಲವು ಗಣ್ಯರು ಭೈರಪ್ಪನವರ ಕುಟುಂಬಕ್ಕೆ ಸಂತಾಪ ಸೂಚಿಸಿದರು.

ಭೈರಪ್ಪನವರ ಪಾರ್ಥಿವ ಶರೀರವನ್ನು ಬೆಂಗಳೂರಿನಿಂದ ಮೈಸೂರಿಗೆ ರವಾನೆ ಮಾಡಲಾಗುತ್ತದೆ. ಮೈಸೂರು ಕಲಾಮಂದಿರದ ಮುಂಭಾಗ ಸಾರ್ವಜನಿಕರ ದರ್ಶನಕ್ಕೆ ಇಡಲಾಗುತ್ತದೆ. ಇಂದು ಸಂಜೆ 6 ಗಂಟೆವರೆಗೆ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.

ಹಿರಿಯ ಸಾಹಿತಿ ಭೈರಪ್ಪ ಅವರ ಪುತ್ರ ರವಿಶಂಕರ್ ಲಂಡನ್ ನಿಂದ ಆಗಮಿಸುತ್ತಿದ್ದಾರೆ. ಹೀಗಾಗಿ ಪಾರ್ಥಿವ ಶರೀರವನ್ನು ಕೋಲ್ಡ್‌ ಸ್ಟೋರೆಜ್‌ನಲ್ಲಿ ಇಡಲಾಗುತ್ತಿದೆ. ಸೆ.26ರಂದು ಶುಕ್ರವಾರ ಬೆಳಗ್ಗೆ ಕುವೆಂಪುನಗರದಲ್ಲಿರುವ ಭೈರಪ್ಪ ನಿವಾಸದಲ್ಲಿ ಪಾರ್ಥೀವ ಶರೀರ ಇಡಲಾಗುತ್ತದೆ. ಪೂಜಾ ವಿಧಿವಿಧಾನಗಳನ್ನು ನೆರವೇರಿಸಿದ ಬಳಿಕ ಚಾಮುಂಡಿಬೆಟ್ಟದ ತಪ್ಪಲಿನಲ್ಲಿ ಬ್ರಾಹ್ಮಣ ಸಂಪ್ರದಾಯದಂತೆ ಅಂತ್ಯಕ್ರಿಯೆ ಮಾಡಲಾಗುತ್ತದೆ.

RELATED ARTICLES
- Advertisment -
Google search engine

Most Popular