ಬೆಂಗಳೂರು : ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಎಸ್ಐಟಿ ತನಿಖೆ ಮತ್ತಷ್ಟು ಚುರುಕುಗೊಳಿಸಿದ್ದು, ಇಂದು ಬೆಂಗಳೂರಿನ ವಿಧಾನಸೌಧದಲ್ಲಿ ಗೃಹ ಸಚಿವರ ಕಚೇರಿಯಲ್ಲಿ ಜಿ ಪರಮೇಶ್ವರ್ ಅವರನ್ನು SIT ಮುಖ್ಯಸ್ಥ ಪ್ರಣಬ್ ಮೋಹಂತಿ ಭೇಟಿಯಾಗಿ ಚರ್ಚಿಸಿದ್ದಾರೆ. ಇನ್ನು ಸಿಐಡಿ ಮುಖ್ಯಸ್ಥರ ನೇಮಕಕ್ಕೆ ರಾಜ್ಯ ಸರ್ಕಾರ ಸಿದ್ಧತೆ ನಡೆಸಿದ್ದು ಎಸ್ಐಟಿ, ಮುಖ್ಯಸ್ಥ ಪ್ರಣಬ್ ಮೊಹಂತಿಯವರನ್ನೇ ನೇಮಕ ಮಾಡುವ ಸಾಧ್ಯತೆ ಇದೆ.
ಸಿಐಡಿ ಮುಖ್ಯಸ್ಥರ ಹುದ್ದೆಗೆ ನೇಮಕಕ್ಕೆ ರಾಜ್ಯ ಸರ್ಕಾರ ಇದೀಗ ತಯಾರಿ ಮಾಡಿಕೊಂಡಿದ್ದು, ಎಸ್ಐಟಿ ಮುಖ್ಯಸ್ಥ ಪ್ರಣವ್ ಮೋಹಂತಿ ಮಾಡುವ ಸಾಧ್ಯತೆ ಇದೆ ಎಂದು ಬೆಳಿಗ್ಗೆ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಚರ್ಚಿಸಲಾಗಿದ್ದು ಸಿಎಂ ಸಿದ್ದರಾಮಯ್ಯ ಕರೆಯ ಮೇರೆಗೆ ಪ್ರಣವ್ ಮೋಹಂತಿ ಭೇಟಿಯಾಗಿದ್ದಾರೆ. ವಿಧಾನಸೌಧದಲ್ಲಿ ಗೃಹ ಸಚಿವರನ್ನು ಭೇಟಿಯಾಗಿದ್ದು ಸರ್ಕಾರ ಇದೀಗ ಒಲವು ತೋರಿದೆ ಇಂದು ಈ ಕುರಿತು ಅಧಿಕೃತ ಆದೇಶ ಪ್ರಕಟಿಸುವ ಸಾಧ್ಯತೆ ಇದೆ.