ಯಾದಗಿರಿ : ಬೆಂಗಳೂರು ನಗರ ಸೇರಿದಂತೆ ಇಡೀ ರಾಜ್ಯಾದ್ಯಂತ ಭಾರಿ ಮಳೆ ಸುರಿಯುತ್ತಿದ್ದು ಅದರಲ್ಲೂ ಕಲಬುರ್ಗಿ, ವಿಜಯಪುರ,ಯಾದಗಿರಿಯಲ್ಲಿ ಕಳೆದ 48 ಗಂಟೆಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿದೆ. ಭಾರಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಕಲ್ಬುರ್ಗಿಯಲ್ಲಿ ಎರಡು ದಿನ ಹಾಗೂ ಯಾದಗಿರಿಯಲ್ಲಿ ಇಂದು ಎಲ್ಲಾ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಯಾದಗಿರಿಯಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಇದೀಗ ಇಂದು ಎಲ್ಲ ಶಾಲೆಗೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಯಾದಗಿರಿ ಜಿಲ್ಲೆಯ ಆದಂತ ಭಾರಿ ಮಳೆ ಸುರಿಯುತ್ತಿದ್ದು, ರಜೆ ಘೋಷಣೆ ಮಾಡಿ ಡಿಡಿಪಿಐ ಚನ್ನಬಸಪ್ಪ ಅವರು ಆದೇಶ ಹೊರಡಿಸಿದ್ದಾರೆ.
ಅದೇ ರೀತಿಯಾಗಿ ಕಲ್ಬುರ್ಗಿಯಲ್ಲಿ ಸಹ ಕಳೆದ 48 ಗಂಟೆಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿದೆ ಇದರಿಂದ ಜನ ಜೀವನ ಸಂಪೂರ್ಣವಾಗಿ ಅಸ್ತವ್ಯಸ್ತವಾಗಿದ್ದು, ಮಕ್ಕಳ ಹಿತ ದೃಷ್ಟಿಯಿಂದ ಮುಂಜಾಗ್ರತ ಕ್ರಮವಾಗಿ ರಜೆ ಘೋಷಿಸಿ ಡಿಸಿ ಎಂದು ಸೂಚಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಡಿಡಿಪಿಐ ಸೂರ್ಯಕಾಂತ್ ಮದಾನೆ ರಜೆ ಘೋಷಣೆ ಮಾಡಿ ಸುತ್ತೋಲೆ ಹೊರಡಿಸಿದ್ದಾರೆ.