ಮೈಸೂರು: ಬೆಂಗಳೂರಿನ ಕೃಷಿ ವಿಶ್ವವಿದ್ಯಾಲಯದ ಹಳೇ ವಿದ್ಯಾರ್ಥಿಗಳ ಸಂಘ ನೀಡುವ ʼಹೊಂಬಾಳೆ ಸಂಹಿತ ಹರಿಣಿಕುಮಾರ್ ಅಲುಮ್ನಿ ಕೃಷಿʼ ಮಾಧ್ಯಮ ಪ್ರಶಸ್ತಿಗೆ ಮೈಸೂರಿನ ಹಿರಿಯ ಪತ್ರಕರ್ತ ಅಂಶಿ ಪ್ರಸನ್ನ ಕುಮಾರ್ ಭಾಜನರಾಗಿದ್ದಾರೆ.
ಅ.11ರಂದು ಬೆಂಗಳೂರಿನ ಹೆಬ್ಬಾಳದಲ್ಲಿರುವ ಕೃಷಿ ವಿಶ್ವವಿದ್ಯಾಲಯದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಪ್ರಶಸ್ತಿಯು ಸ್ಮರಣಿಕೆ, ಪ್ರಮಾಣ ಪತ್ರ ಹಾಗೂ ಹತ್ತು ಸಾವಿರ ರೂ.ನಗದು ಒಳಗೊಂಡಿರುತ್ತದೆ ಎಂದು ಪ್ರಕಟಣೆ ತಿಳಿಸಿದೆ.