ವರದಿ: ವಿನಯ್ ದೊಡ್ಡಕೊಪ್ಪಲು
ಕೆ.ಆರ್.ನಗರ : ಮೈಸೂರು ಮತ್ತು ಕೊಡಗು ಲೋಕಸಭಾ ಕ್ಷೇತ್ರದ ದಿಶಾ ಸಮಿತಿ ನಾಮ ನಿರ್ದೇಶಿತ ಸದಸ್ಯೆಯನ್ನಾಗಿ ಸಾಲಿಗ್ರಾಮ ತಾಲೂಕಿನ ಹಳಿಯೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಬಿ.ಜೆ.ರೇಖಾ ಜಗದೀಶ್ ಅವರನ್ನು ನೇಮಕ ಮಾಡಲಾಗಿದೆ.
ಕೇಂದ್ರದ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರ ಶಿಫಾರಸ್ಸಿನ ಮೇರೆಗೆ ಹಳಿಯೂರು ಗ್ರಾಮ ಪಂಚಾಯಿತಿ ಅಧ್ಯಕ್ಷರನ್ನು ದಿಶಾ ಸಮಿತಿಗೆ ನಾಮಕರಣ ಮಾಡಲಾಗಿದ್ದುಇದಕ್ಕೆ ಕ್ಷೇತ್ರದ ಜೆಡಿಎಸ್ ಮುಖಂಡರು ಮತ್ತು ಕಾರ್ಯಕರ್ತರು ಹರ್ಷ ವ್ಯಕ್ತಪಡಿಸಿದ್ದಾರೆ.
ತಮ್ಮ ನೇಮಕಕ್ಕೆ ಕಾರಣರಾದ ಮಾಜಿ ಸಚಿವರಾದ ಸಾ.ರಾ.ಮಹೇಶ್ ಮತ್ತು ಪಕ್ಷದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿರುವ ಡಿ.ಜೆ.ರೇಖಾ ಜಗದೀಶ್ ಕೇಂದ್ರ ಸರ್ಕಾರದಿಂದ ಕ್ಷೇತ್ರಕ್ಕೆ ದೊರೆಯುವ ಎಲ್ಲಾ ಸವಲತ್ತು ಮತ್ತು ಸೌಲಭ್ಯಗಳನ್ನು ಒದಗಿಸಲು ಸಾ.ರಾ.ಮಹೇಶ್ ಅವರ ನಿರ್ದೇಶನದಂತೆ ಕೆಲಸ ಮಾಡುವುದಾಗಿ ತಿಳಿಸಿದ್ದಾರೆ.
ಅಭಿನಂದನೆ- ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ದಿಶಾ ಸಮಿತಿ ಸದಸ್ಯರಾಗಿ ನೇಮಕವಾಗಿರುವ ಹಳಿಯೂರು ಗ್ರಾ.ಪಂ.ಅಧ್ಯಕ್ಷೆ ಡಿ ಜೆ.ರೇಖಾಜಗದೀಶ್ ಅವರನ್ನು ಎಪಿಎಂಸಿ ಮಾಜಿ ಅಧ್ಯಕ್ಷ ಹೆಚ್.ಎನ್.ರಾಜೇಗೌಡ, ಹಳಿಯೂರು ಪಂಚಾಯಿತಿ ಮಾಜಿ ಅಧ್ಯಕ್ಷ ಹೆಚ್.ಎಸ್.ರಾಜೇಗೌಡ ಹಾಗೂ ಆಡಳಿತ ಮಂಡಳಿ ಸದಸ್ಯರು ಮತ್ತು ಹೊಸೂರು ಕೃಷಿ ಪತ್ತಿನ ಆಡಳಿತ ಮಂಡಳಿಯರು ಅಭಿನಂದಿಸಿದ್ದಾರೆ.
ದಿಶಾ ಸಮಿತಿ ಸದಸ್ಯೆಯಾಗಿ ನಾಮ ನಿರ್ದೇಶನಗೊಂಡಿರುವ ಡಿ.ಜೆ.ರೇಖಾಜಗದೀಶ್ ಅವರಿಗೆ ಮಾಜಿ ಸಚಿವ ಸಾ.ರಾ.ಮಹೇಶ್, ಜಿ.ಪಂ.ಮಾಜಿ ಸದಸ್ಯೆ ವೀಣಾಕೀರ್ತಿ, ಹೊಸೂರು ಕೃಷಿ ಪತ್ತಿನ ಸಹಕಾರ ಸಂಘದ ಮಾಜಿ ಅದ್ಯಕ್ಷ ಹೆಚ್.ಆರ್.ಮಧುಚಂದ್ರ, ಹಳಿಯೂರು ಗ್ರಾ.ಪಂ.ಮಾಜಿ ಉಪಾಧ್ಯಕ್ಷ ಹೆಚ್.ಆರ್.ಕೃಷ್ಣಮೂರ್ತಿ, ಜಿಲ್ಲಾ ಜೆಡಿಎಸ್ ಮುಖಂಡ ಹೆಚ್.ಕೆ.ಮಧುಚಂದ್ರ ಅವರುಗಳು ಶುಭಾಷಯ ಕೋರಿದ್ದಾರೆ.