ಬೆಂಗಳೂರು : ಮಂಡ್ಯ ಜಿಲ್ಲೆಯ ಮದ್ದೂರು ಪಟ್ಟಣದಲ್ಲಿ ಗಣೇಶ ಮೆರವಣಿಗೆ ವೇಳೆ ಕಲ್ಲುತೂರಾಟ ನಡೆಸಿದ ಘಟನೆ ಇಡಿ ರಾಜ್ಯಾದ್ಯಂತ ಹಿಂದೂ ಕಾರ್ಯಕರ್ತರನ್ನು ಕೆರಳಿಸಿತ್ತು. ಇದೀಗ ಮದ್ದೂರಿನಲ್ಲಿ ಗಣೇಶ ಮೆರವಣಿಗೆ ವೇಳೆ ನಡೆದ ಕಲ್ಲು ತೂರಾಟ ಪೂರ್ವಯೋಜಿತ ಕೃತ್ಯವೆಂಬುದು ಪೊಲೀಸರ ತನಿಖೆಯಲ್ಲಿ ಬಟಾಬಯಲಾಗಿದೆ. ಘಟನೆಗೆ ಸಂಬಂಧಿಸಿದಂತೆ 32 ಆರೋಪಿಗಳನ್ನು ಬಂಧಿಸಲಾಗಿದ್ದು, ವಿಚಾರಣೆ ನಡೆಯುತ್ತಿದೆ.
ಪೊಲೀಸರ ತನಿಖೆಯಲ್ಲಿ ಕಲ್ಲುತೂರಾಟ ಪೂರ್ವ ನಿಯೋಜಿತ ಎನ್ನುವ ಸ್ಫೋಟಕ ಅಂಶ ಬಯಲಾಗಿದೆ ಈ ವಿಚಾರವಾಗಿ, ತನಿಖೆಯ ವೇಳೆ ಆರೋಪಿಗಳು ಬಾಯಿ ಬಿಟ್ಟಿದ್ದು, ಸ್ವಾಮಿ ಎಂಬುವವರ ನೇತೃತ್ವದಲ್ಲಿ ಕೂರಿಸಿದ್ದ ಗಣೇಶ ಮೂರ್ತಿ ಮೇಲೆ ಕಲ್ಲು ತೂರಲು ಪೂರ್ವಯೋಜನೆ ಮಾಡಲಾಗಿತ್ತು ಎಂದು ಒಪ್ಪಿಕೊಂಡಿದ್ದಾರೆ. ಆದರೆ ಟಾರ್ಗೆಟ್ ಮಾಡಿದ್ದ ಗಣೇಶ ಮೆರವಣಿಗೆಯ ಬದಲು ಬೇರೆ ಮೆರವಣಿಗೆಯ ಮೇಲೆ ಕಲ್ಲು ತೂರಾಟ ನಡೆದಿರುವುದು ಪತ್ತೆಯಾಗಿದೆ.
ಮದ್ದೂರಿನ ರಾಮ್ ರಹೀಮ್ ನಗರದಲ್ಲಿ ಗಣೇಶ ಮೆರವಣಿಗೆ ವೇಳೆ ಸೆಪ್ಟೆಂಬರ್ 7 ರಂದು ಸಂಜೆ ಮಸೀದಿಯಿಂದ ಕಲ್ಲು ತೂರಾಟ ಮಾಡಲಾಗಿತ್ತು. ಘಟನೆ ನಂತರ ಪಟ್ಟಣದಲ್ಲಿ ಉದ್ವಿಗ್ನ ಪರಿಸ್ಥಿತಿ ಸೃಷ್ಟಿಯಾಗಿತ್ತು. ಕಲ್ಲು ತೂರಾಟ ಪ್ರತಿಭಟಿಸಿ ಮರುದಿನ ಹಿಂದೂ ಸಂಘಟನೆಗಳು ಮೆರವಣಿಗೆ ನಡೆಸಿದ್ದವು. ಆ ಸಂದರ್ಭ ಪೊಲೀಸರು ಲಾಠಿಚಾರ್ಜ್ ಮಾಡಿದ್ದರು.