ದಕ್ಷಿಣಕನ್ನಡ : ಧರ್ಮಸ್ಥಳ ಪ್ರಕರಣದ ತನಿಖೆ ಚುರುಕುಗೊಳಿಸಿದ ಎಸ್ಐಟಿ ಧರ್ಮಸ್ಥಳ ಗ್ರಾಂ ಪಂಚಾಯಿತಿ ಮಾಜಿ ಅಧ್ಯಕ್ಷರಿಗೆ ಬುಲಾವ್ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿರುವ ಎಸ್ಐಟಿ ಕಚೇರಿಗೆ ನಾಲ್ವರು ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷರು ವಿಚಾರಣೆಗೆ ಹಾಜರಾಗಿದ್ದಾರೆ.
ಧರ್ಮಸ್ಥಳ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷರಾದ ಕೇಶವ ಬೆಳಾಲು, ಗೀತಾ, ಚಂದನ್ ಕಾಮತ್, ಪ್ರಭಾಕರ್ ವಿಚಾರಣೆಗೆ ಹಾಜರಾಗಿದ್ದಾರೆ. ಶವ ಹೂತು ಹಾಕಿರುವ ಕುರಿತು ಎಸ್ಐಟಿ ಅಧಿಕಾರಿಗಳು ಗ್ರಾಂ ಪಂಚಾಯಿತಿ ಮಾಜಿ ಅಧ್ಯಕ್ಷರಿಗೆ ಬುಲಾವ್ ನೀಡಿದ್ದರು. ಹೀಗಾಗಿ ಗ್ರಾಮ ಪಂಚಾಯತಿ ನಾಲ್ವರು ಅಧ್ಯಕ್ಷರು ಬೆಳ್ತಂಗಡಿ ತಾಲೂಕಿನಲ್ಲಿರುವ ಎಸ್ಐಟಿ ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದಾರೆ.