ಬೆಂಗಳೂರು : ರಾಜ್ಯದಲ್ಲಿ ಈಗಾಗಲೇ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆ ಆರಂಭವಾಗಿದ್ದು, ಮೊದಲೆರಡು ದಿನಗಳ ಕಾಲ ಸರ್ವರ್ ಹಾಗೂ ಮೊಬೈಲ್ನಲ್ಲಿ ಹಲವು ತಾಂತ್ರಿಕ ದೋಷಗಳು ಕಂಡು ಬಂದಿದ್ದವು. ಆದರೆ ಇದೀಗ ಜಾತಿ ಗಣತಿ ಸಮೀಕ್ಷೆ ವೇಗ ಪಡೆದುಕೊಂಡಿದೆ. ಈ ವಿಚಾರವಾಗಿ ಗೃಹ ಸಚಿವ ಜಿ ಪರಮೇಶ್ವರ್ ಪ್ರತಿಕ್ರಿಯ ನೀಡಿದ್ದು, ನಿಗದಿತ ಸಮಯದೊಳಗೆ ಜಾತಿಗಣತಿ ಸಮೀಕ್ಷೆ ಪೂರ್ಣಗೊಳಿಸುತ್ತೇವೆ ಎಂದು ತಿಳಿಸಿದರು.
ಬೆಂಗಳೂರನಲ್ಲಿ ಮಾತನಾಡಿದ ಅವರು, ಜಾತಿ ಗಣತಿ ಬಗ್ಗೆ ಗೊಂದಲದ ಹೇಳಿಕೆ ಕೊಡಬೇಡಿ ಎಂದು ಬಿಜೆಪಿಯವರಿಗೆ ಮನವಿ ಮಾಡಿದರು. ಈ ಸಮೀಕ್ಷೆಯ ಮೂಲಕ ಸಮುದಾಯಗಳ ಸ್ಥಿತಿ-ಗತಿ ಗೊತ್ತಾಗುತ್ತದೆ. ಸಮೀಕ್ಷೆಯಿಂದ ಇನ್ನೇನು ದುರ್ಬಳಕೆ ಮಾಡಿಕೊಳ್ಳಲು ಸಾಧ್ಯ? ಕೇಂದ್ರ ಸರ್ಕಾರವು ಜಾತಿಗಣತಿ ಮಾಡುತ್ತದೆ ಆಗ ಗತಿಯಲ್ಲಿ ಭಾಗವಹಿಸಲು ಅಂದರೆ ಗೊಂದಲ ಆಗಲ್ವಾ? ರಾಜ್ಯ ಬಿಜೆಪಿ ನಾಯಕರು ಇದನ್ನು ಅರ್ಥ ಮಾಡಿಕೊಳ್ಳಬೇಕು.ನಿಗದಿತ ಸಮಯದೊಳಗೆ ಸಮೀಕ್ಷೆ ಮುಗಿಸುತ್ತೇವೆ. ತುಮಕೂರು ಜಿಲ್ಲೆಯಲ್ಲೂ ಕೂಡ ಸಮೀಕ್ಷೆ ವೇಗ ಪಡೆದುಕೊಂಡಿದೆ ಎಂದು ತಿಳಿಸಿದರು.
ಇನ್ನು ನಿಗಮ ಮಂಡಳಿ ನೇಮಕದಲ್ಲಿ ಪರಿಷ್ಕರಣೆಯಾದ ವಿಚಾರವಾಗಿ ನಿಗಮ ಮಂಡಳಿಗಳಿಗೆ ನಾವು ಪಟ್ಟಿ ತಯಾರಿಸಿ ಕೊಟ್ಟಿದ್ದೆವು. ಸಿಎಂ ಮತ್ತು ಡಿಸಿಎಂ ಚರ್ಚಿಸಿ ಕೆಲವು ಬದಲಾವಣೆ ಮಾಡಿದ್ದಾರೆ. ಹೈಕಮಾಂಡ್ ಗಮನಕ್ಕೆ ತಂದು ಬದಲಾವಣೆ ಮಾಡಿದ್ದಾರೆ. ನಾನು ಕೆಪಿಸಿಸಿ ಅಧ್ಯಕ್ಷ ಆಗಿದ್ದಾಗಲೂ ಕೂಡ ಬದಲಾವಣೆ ಮಾಡಿದ್ದೆವು. ಬಿಎಂಟಿಸಿ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನ ಬದಲಾವಣೆ ಬಗ್ಗೆಯೂ ಕೇಳಲ್ಪಟ್ಟಿದ್ದೇನೆ ಎಂದು ಬೆಂಗಳೂರಿನಲ್ಲಿ ಗೃಹ ಸಚಿವ ಜಿ ಪರಮೇಶ್ವರ್ ತಿಳಿಸಿದರು.