ಮಂಗಳೂರು (ದಕ್ಷಿಣ ಕನ್ನಡ): ಬಟ್ಟೆ ಅಂಗಡಿಯೊಂದರಲ್ಲಿ ರಾತ್ರಿ ಬೆಂಕಿ ಅವಘಡ ಸಂಭವಿಸಿದ ಘಟನೆ ಮಂಗಳೂರು ನಗರದ ಹಂಪನಕಟ್ಟೆಯ ಟೋಕಿಯೊ ಮಾರ್ಕೆಟ್ ಬಳಿ ನಡೆದಿದೆ. ಘಟನೆಯಿಂದ ಲಕ್ಷಾಂತರ ಮೌಲ್ಯದ ಬಟ್ಟೆಬರೆಗಳು ಅಗ್ನಿಗೆ ಆಹುತಿಯಾಗಿದೆ.
ಕಟ್ಟಡವೊಂದರ ಮೇಲಿನ ಮಹಡಿಯಲ್ಲಿನ ಬಟ್ಟೆ ಅಂಗಡಿಯಲ್ಲಿ ಬೆಂಕಿ ಕಾಣಿಸಿಕೊಂಡಿತು. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿಯನ್ನು ನಂದಿಸುವ ನಿಟ್ಟಿನಲ್ಲಿ ಕಾರ್ಯಾಚರಣೆ ನಡೆಸಿದರು. ಬೆಂಕಿ ದುರಂತಕ್ಕೆ ಕಾರಣ ತಿಳಿದು ಬಂದಿಲ್ಲ.