Wednesday, October 1, 2025
Google search engine

Homeಅಪರಾಧಹಾಸನದ ಹಳೇಆಲೂರಿನಲ್ಲಿ ನಿಗೂಢ ಸ್ಫೋಟ: ದಂಪತಿ ಸಾವು

ಹಾಸನದ ಹಳೇಆಲೂರಿನಲ್ಲಿ ನಿಗೂಢ ಸ್ಫೋಟ: ದಂಪತಿ ಸಾವು

ಹಾಸನ : ಮೊನ್ನೆ ತಡರಾತ್ರಿ ಜಿಲ್ಲೆಯ ಹಳೇಆಲೂರು ಪಟ್ಟಣದಲ್ಲಿ ನಿಗೂಢ ಸ್ಫೋಟದಲ್ಲಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ದಂಪತಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಸುದರ್ಶನ್ (32), ಕಾವ್ಯ (27) ದಂಪತಿ ಮೃತರು. ಸೋಮವಾರ ರಾತ್ರಿ ಹಿಮ್ಸ್‌ನಲ್ಲಿ ಚಿಕಿತ್ಸೆಗೆ ದಾಖಲಾಗಿದ್ದರು. ರಾತ್ರಿಯೇ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಝೀರೋ ಟ್ರಾಫಿಕ್‌ನಲ್ಲಿ ರವಾನೆ ಮಾಡಲಾಗಿತ್ತು.

ಸೋಮವಾರ ರಾತ್ರಿ 8:30 ರ ಸಮಯದಲ್ಲಿ ಮನೆಯಲ್ಲಿ ನಿಗೂಢ ಸ್ಫೋಟ ಸಂಭವಿಸಿತ್ತು. ಮನೆಯಲ್ಲಿದ್ದ ಎರಡು ಸಿಲಿಂಡರ್‌ ಹಾಗೂ ಗೀಸರ್‌ ಹಾಗೇ ಇದ್ದೂ ಸ್ಫೋಟಕ್ಕೆ ಕಾರಣವೇನು ಎಂಬುದು ನಿಗೂಢವಾಗಿಯೇ ಉಳಿದಿತ್ತು. ಸಿಡಿಮದ್ದು ತಯಾರಿಕೆ ಮಾಡುತ್ತಿದ್ದ ಮದ್ದು ಸ್ಫೋಟಗೊಂಡು ಈ ದುರಂತ ನಡೆದಿರುವುದು ಗೊತ್ತಾಗಿದೆ.ಮನೆಯಲ್ಲಿ ಸಿಡಿಮದ್ದನ್ನು ತಯಾರಿಸುತ್ತಿದ್ದರು. ಅದಕ್ಕಾಗಿ ಮದ್ದನ್ನು ಸಂಗ್ರಹಿಸಿದ್ದರು. ಆಕಸ್ಮಿಕವಾಗಿ ಬೆಂಕಿ ತಗುಲಿ ಸ್ಫೋಟಗೊಂಡಿದೆ ಎಂಬ ಮಾಹಿತಿ ಲಭ್ಯವಾಗಿದೆ.

RELATED ARTICLES
- Advertisment -
Google search engine

Most Popular