Thursday, October 2, 2025
Google search engine

Homeಸ್ಥಳೀಯಮೈಸೂರು ದಸರಾ ಜಂಬೂಸವಾರಿಗೆ ಕ್ಷಣಗಣನೆ ಆರಂಭ : ಲಕ್ಷಾಂತರ ಜನರು ಸಾಕ್ಷಿಯಾಗಲಿರುವ ಐತಿಹಾಸಿಕ ಮೆರವಣಿಗೆ

ಮೈಸೂರು ದಸರಾ ಜಂಬೂಸವಾರಿಗೆ ಕ್ಷಣಗಣನೆ ಆರಂಭ : ಲಕ್ಷಾಂತರ ಜನರು ಸಾಕ್ಷಿಯಾಗಲಿರುವ ಐತಿಹಾಸಿಕ ಮೆರವಣಿಗೆ

ಮೈಸೂರು : ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆ ಜಂಬೂಸವಾರಿ ಮೆರವಣಿಗೆಗೆ ಮೈಸೂರು ಸಂಪೂರ್ಣವಾಗಿ ಸಜ್ಜಾಗಿದ್ದು, ಐತಿಹಾಸಿಕ ಮೆರವಣಿಗೆಗೆ ಕ್ಷಣಗಣನೆ ಆರಂಭವಾಗಿದೆ.

ವಿಜಯದಶಮಿ ದಿನವಾದ ಇಂದು ಗುರುವಾರ ನಡೆಯುವ ಐತಿಹಾಸಿಕ ವಿಜಯದಶಮಿ ಮೆರವಣಿಗೆಯನ್ನು ನೋಡಲು ಲಕ್ಷಾಂತರ ಮಂದಿ ಕಾತರದಿಂದ ಕಾಯುತ್ತಿದ್ದಾರೆ. ಈಗಾಗಲೇ ದೇಶ ವಿದೇಶಗಳಿಂದ ಲಕ್ಷಾಂತರ ಜನರು ಮೈಸೂರಿಗೆ ಲಗ್ಗೆ ಇಟ್ಟಿದ್ದಾರೆ.

ಅಂಬಾರಿಯಲ್ಲಿ ಇರಿಸಲಾಗುವ ಚಾಮುಂಡಿ ತಾಯಿಯ ಉತ್ಸವಮೂರ್ತಿ ಚಾಮುಂಡಿ ಬೆಟ್ಟದಿಂದ ನಾಳೆ ಬೆಳಿಗ್ಗೆ 8 ಗಂಟೆಗೆ ಹೊರಬಂದು ಮೆರವಣಿಗೆ ಮೂಲಕ ಅರಮನೆಯತ್ತ ಸಾಗುತ್ತದೆ‌. ಬೆಳಿಗ್ಗೆ 10:15 ಕ್ಕೆ ಅರಮನೆಯಲ್ಲಿ ಉತ್ತರ ಪೂಜೆ ಆರಂಭವಾಗಲಿದೆ.

ಇಂದು 10:10ಕ್ಕೆ ಅರಮನೆಯ ಸವಾರಿ ತೊಟ್ಟಿಯಲ್ಲಿ ಜಟ್ಟಿ ಕಾಳಗ ನಡೆಯಲಿದೆ.

ಜಟ್ಟಿಕಾಳಗ ಮುಗಿದ ಬಳಿಕ, 10:50ಕ್ಕೆ ಅರಮನೆ ಆವರಣದಿಂದ ಭುವನೇಶ್ವರಿ ದೇವಸ್ಥಾನಕ್ಕೆ ವಿಜಯಯಾತ್ರೆ ಹೊರಡಲಿದ್ದು, ಬನ್ನಿಪೂಜೆ ಬಳಿಕ ಸ್ವಸ್ಥಾನಕ್ಕೆ ವಾಪಸ್ ಆಗಲಿದೆ. ಅಂತಿಮವಾಗಿ ಬಳಿಕ‌ ಯದುವೀರ್ ಕಂಕಣ ವಿಸರ್ಜನೆ ಮಾಡಲಿದ್ದಾರೆ.

ನಂದಿಧ್ವಜ ಪೂಜೆ ನಂತರ ಮೆರವಣಿಗೆ

ಮಧ್ಯಾಹ್ನ 1 ರಿಂದ 1.18 ರೊಳಗೆ ಅರಮನೆಯ ಬಲರಾಮ ದ್ವಾರ ದಲ್ಲಿ ನಂದಿಧ್ವಜಕ್ಕೆ ಪೂಜೆ ಸಲ್ಲಿಸುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಂಬೂಸವಾರಿಗೆ ನಾಂದಿ ಹಾಡುವರು.

ಸಂಜೆ 4.42 ರಿಂದ 5.06 ರೊಳಗೆ 750 ಕೆಜಿ ತೂಕದ ಚಿನ್ನದ ಅಂಬಾರಿಯಲ್ಲಿ ದಸರಾ ಗಜಪಡೆಯ ಕ್ಯಾಪ್ಟನ್ ಅಭಿಮನ್ಯು ಹೊತ್ತು ತರುವ ಶ್ರೀ ಚಾಮುಂಡೇಶ್ವರಿ ದೇವಿ ಉತ್ಸವಮೂರ್ತಿಗೆ ಗಣ್ಯರು ಪುಷ್ಪಾರ್ಚನೆ ನೆರವೇರಿಸಲಿದ್ದಾರೆ.

ಈ ಬಾರಿಯೂ ಸುಮಾರು ಎರಡು ಗಂಟೆಗಳ ಕಾಲ ತಡವಾಗಿ ಚಿನ್ನದ ಅಂಬಾರಿ ಹೊತ್ತು ಅಭಿಮನ್ಯು ಹೊರಡಲಿದ್ದಾನೆ. ಇದು 6 ನೇ ಬಾರಿಗೆ ಅಭಿಮನ್ಯು ಅಂಬಾರಿ ಹೊರಲಿದ್ದಾನೆ.

ಇಂದು ಜಂಬೂಸವಾರಿ ಹಿನ್ನೆಲೆಯಲ್ಲಿ ಅರಮನೆ ಅಂಗಳದಲ್ಲಿ 45 ಸಾವಿರ ಆಸನಗಳ ವ್ಯವಸ್ಥೆ ಮಾಡಲಾಗಿದೆ.

ಜಂಬೂ ಸವಾರಿಯ ನಂತರ ರಾತ್ರಿ 7 ಗಂಟೆಗೆ ಬನ್ನಿಮಂಪಟದಲ್ಲಿ ಪಂಜಿನ ಕವಾಯತು ಇರಲಿದೆ. ಇದರೊಂದಿಗೆ ದಸರಾ ಆಚರಣೆಯು ಅಂತ್ಯವಾಗಲಿದೆ.

ಅಭಿಮನ್ಯು ಜೊತೆಗೆ 14 ಆನೆಗಳ ಪಡೆ

ಈ ಬಾರಿ ಕ್ಯಾಪ್ಟನ್ ಅಭಿಮನ್ಯು ಜೊತೆ  ಒಟ್ಟು 14 ಆನೆಗಳು ಜಂಬೂ ಸವಾರಿಯಲ್ಲಿ ಭಾಗಿಯಾಗಲಿವೆ. ಕುಮ್ಕಿ ಆನೆಗಳಾದ ಕಾವೇರಿ ಹಾಗೂ ರೂಪ ಗಜಪಡೆ ಕ್ಯಾಪ್ಟನ್ ಅಭಿಮನ್ಯು ಜೊತೆಗೆ ಹೆಜ್ಜೆ ಹಾಕಲಿವೆ. ನಿಶಾನೆ ಆನೆಯಾಗಿ ಧನಂಜಯ, ನೋಪತ್ ಆನೆಯಾಗಿ ಗೋಪಿ ಕರ್ತವ್ಯ ನಿರ್ವಹಿಸಲಿವೆ.

ಪಾಸ್‌ ಇಲ್ಲದವರಿಗೆ ಪ್ರವೇಶವಿಲ್ಲ

ವಿಜಯದಶಮಿ ಹಾಗೂ ಪಂಜಿನ ಕವಾಯತು ಗೆ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ

ಈ‌ ಬಾರಿಯ ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂಸವಾರಿ ಮೆರವಣಿಗೆ ಹಾಗೂ ಪಂಜಿನ ಕವಾಯತು ಕಾರ್ಯಕ್ರಮವನ್ನು ಅತ್ಯಂತ ವ್ಯವಸ್ಥಿತವಾಗಿ ನಡೆಸುವ ಉದ್ದೇಶದಿಂದ ಪೊಲೀಸ್ ಇಲಾಖೆ ಹಲವು‌ ನಿಯಮಗಳನ್ನು ಜಾರಿ‌ ಮಾಡಿದೆ.  ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ತಡೆಯಲು ಕಡ್ಡಾಯವಾಗಿ ಜಂಬೂಸವಾರಿ ಹಾಗೂ ಪಂಜಿನ ಕವಾಯತು ಕಾರ್ಯಕ್ರಮಕ್ಕೆ ನಿಗದಿತ ಪಾಸ್ ಇರುವವರಿಗೆ ಮಾತ್ರ ಪ್ರವೇಶ ನೀಡಲಾಗುವುದು.

ಕಾರ್ಯಕ್ರಮಕ್ಕೆ ಬರುವವರು ನಿಗದಿತ ಸ್ಥಳದಲ್ಲೇ ತಮ್ಮ ವಾಹನಗಳನ್ನು ಪಾರ್ಕ್ ಮಾಡಬೇಕು. ಜಂಬೂ ಸವಾರಿ ಸಾಗುವ ರಸ್ತೆಯಲ್ಲಿ ಹಲವು ಶಿಥಿಲಗೊಂಡ ಕಟ್ಟಡಗಳಿದ್ದು ಈ ಬಾರಿ ಆ ಕಟ್ಟಡಗಳ ಮೇಲೆ ಕುಳಿತು ಮೆರವಣಿಗೆ ವೀಕ್ಷಣೆಗೆ ನಿರ್ಬಂಧ ವಿಧಿಸಲಾಗಿದೆ.‌ ಯಾರು ಕಟ್ಟಡಗಳ‌ ಮೇಲೆ‌ ಹತ್ತಬಾರದು ಎಂದು ಖಡಕ್‌ ಸೂಚನೆ ನೀಡಲಾಗಿದೆ.

RELATED ARTICLES
- Advertisment -
Google search engine

Most Popular