Thursday, October 2, 2025
Google search engine

Homeಸ್ಥಳೀಯಮೈಸೂರು ದಸರಾ: ಸ್ತಬ್ಧಚಿತ್ರಗಳ ಅದ್ಧೂರಿ ಮೆರವಣಿಗೆಯಲ್ಲಿ ‘ಶಕ್ತಿ’ ಯೋಜನೆಯ ಚಮತ್ಕಾರ

ಮೈಸೂರು ದಸರಾ: ಸ್ತಬ್ಧಚಿತ್ರಗಳ ಅದ್ಧೂರಿ ಮೆರವಣಿಗೆಯಲ್ಲಿ ‘ಶಕ್ತಿ’ ಯೋಜನೆಯ ಚಮತ್ಕಾರ

ಮೈಸೂರು: ಮೈಸೂರು ದಸರಾದ ವೈಭವ ಹೆಚ್ಚಿಸಲು ಸ್ತಬ್ಧಚಿತ್ರಗಳ ಅದ್ಧೂರಿ ಮೆರವಣಿಗೆಯೊಂದಿಗೆ ಆರಂಭವಾಗಿದೆ.

ಒಟ್ಟು 58 ಸ್ತಬ್ಧಚಿತ್ರಗಳು ಈ ಬಾರಿಯ ದಸರಾ ಮೆರವಣಿಗೆಯ ಪ್ರಮುಖ ಆಕರ್ಷಣೆಯಾಗಿವೆ. ರಾಜ್ಯ ಸರ್ಕಾರದ ವಿವಿಧ ಯೋಜನೆಗಳು ಹಾಗೂ ಅಭಿವೃದ್ಧಿ ಕಾರ್ಯಗಳ ಕುರಿತು ಜನರಿಗೆ ಮಾಹಿತಿ ನೀಡುವ ಉದ್ದೇಶದಿಂದ ಈ ಸ್ತಬ್ಧಚಿತ್ರಗಳನ್ನು ವಿನ್ಯಾಸಗೊಳಿಸಲಾಗಿದೆ.ಈ ವರ್ಷದ ಮೆರವಣಿಗೆಯಲ್ಲಿ ಶಕ್ತಿ ಯೋಜನೆಯ ಸ್ತಬ್ಧಚಿತ್ರವು ವಿಶೇಷವಾಗಿ ಗಮನ ಸೆಳೆಯುತ್ತಿದೆ. ಮಹಿಳೆಯರಿಗೆ ಉಚಿತ ಸಾರಿಗೆ ಸೌಲಭ್ಯ ಒದಗಿಸುವ ಮೂಲಕ ಸಮಾಜದಲ್ಲಿ ಸಕಾರಾತ್ಮಕ ಬದಲಾವಣೆ ತಂದಿರುವ ಈ ಯೋಜನೆಯ ಯಶಸ್ಸನ್ನು ಸ್ತಬ್ಧಚಿತ್ರವು ಪರಿಣಾಮಕಾರಿಯಾಗಿ ಪ್ರದರ್ಶಿಸುತ್ತಿದೆ.

ಯೋಜನೆ ಜಾರಿಯಾದ ನಂತರ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ದೇವಾಲಯಗಳಿಗೆ ಭೇಟಿ ನೀಡುತ್ತಿರುವುದು ಹಾಗೂ ಇತರ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುತ್ತಿರುವುದು ಸರ್ಕಾರದ ಉದ್ದೇಶ ಸಫಲವಾಗಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ತಮ್ಮ ಸಾಧನೆಯನ್ನು ರಾಜ್ಯಕ್ಕೆ ತಲುಪಿಸುವ ಪ್ರಯತ್ನವನ್ನು ಸರ್ಕಾರ ಈ ಸ್ತಬ್ಧಚಿತ್ರದ ಮೂಲಕ ಮಾಡುತ್ತಿದೆ.

RELATED ARTICLES
- Advertisment -
Google search engine

Most Popular