- ಈ ವಿಶೇಷ ದಿನದ ಬಹು ವಿಶೇಷ ಫೋಟೋಗಳು ಇಲ್ಲಿವೆ
ಮೈಸೂರು: ನಾಡ ಹಬ್ಬ ದಸರಾದ ಪ್ರಮುಖ ಆಕರ್ಷಣೆ ಎಂದರೆ ಅದು ಜಂಬೂ ಸವಾರಿ. ತಾಯಿ ಚಾಮುಂಡೇಶ್ವರಿ ವಿರಾಜಮಾನಳಾಗಿರುವ 750 ಕೆಜಿ ಚಿನ್ನದ ಅಂಬಾರಿ ಹೊತ್ತ ಅಭಿಮನ್ಯು ತನ್ನ ಗಜಪಡೆಯ ಜೊತೆ ಸಾಗಿದ್ದು

ಕುಂಭ ಲಗ್ನದಲ್ಲಿ ಹೊರಟ ಅಭಿಮನ್ಯು
ಅಭಿಮನ್ಯುವಿಗೆ ಎಡ ಹಾಗೂ ಬಲ ಭಾಗದಲ್ಲಿ ರೂಪ ಹಾಗೂ ಕಾವೇರಿ ಕುಮ್ಕಿ ಆನೆಗಳಾಗಿ ಸಾಥ್ ಕೊಟ್ಟಿದ್ದು, ಸಂಜೆ 4.42 ಗಂಟೆಯಿಂದ 5.16ರ ನಡುವೆ ಶುಭ ಕುಂಭ ಲಗ್ನದಲ್ಲಿ ವಿಜಯದಶಮಿ ಮೆರವಣಿ ಜಂಬೂ ಸವಾರಿಗೆ ಚಾಲನೆ ಸಿಕ್ಕಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ರಾಜವಂಶಸ್ಥ ಯದುವೀರ್, ಜಿಲ್ಲಾ ಉಸ್ತುವಾರಿ ಸಚಿವ ಡಾ. ಹೆಚ್.ಸಿ.ಮಹಾದೇವಪ್ಪ,ಸೇರಿದಂತೆ ವಿವಿಧ ಗಣ್ಯರು ಚಾಮುಂಡೇಶ್ವರಿ ತಾಯಿಗೆ ಪುಷ್ಪಾರ್ಚನೆ ಮಾಡಿ ಚಾಲನೆ ಕೊಟ್ಟಿದ್ದಾರೆ. ಈ ಸಂದರ್ಭದಲ್ಲಿ ರಾಷ್ಟ್ರಗೀತೆಯನ್ನು ನುಡಿಸಲಾಗಿದ್ದು,ಅದರ ಜೊತೆಗೆ ಪಿರಂಗಿ ದಳವು 21 ಸುತ್ತು ಕುಶಾಲತೋಪುಗಳನ್ನು ಸಿಡಿಸಿ ಜಂಬೂ ಸವಾರಿಯನ್ನ ಅಧಿಕೃತವಾಗಿ ಚಾಲನೆ ನೀಡಿದ್ದಾರೆ.

