Friday, October 3, 2025
Google search engine

Homeರಾಜ್ಯಸುದ್ದಿಜಾಲನಾಳೆ ಬೆಳಗಾವಿಗೆ ಬರಲಿರುವ ಸಿಎಂ ಹೊಸ ಜಿಲ್ಲೆ ಘೋಷಣೆ ಮಾಡಲಿ: ಕಡಾಡಿ ಆಗ್ರಹ

ನಾಳೆ ಬೆಳಗಾವಿಗೆ ಬರಲಿರುವ ಸಿಎಂ ಹೊಸ ಜಿಲ್ಲೆ ಘೋಷಣೆ ಮಾಡಲಿ: ಕಡಾಡಿ ಆಗ್ರಹ

ವರದಿ: ಸ್ಟೀಫನ್ ಜೇಮ್ಸ್


ಬೆಳಗಾವಿ : ಜಿಲ್ಲೆಯ ಭೌಗೋಳಿಕವಾಗಿ ದೊಡ್ಡದಾಗಿದೆ‌ ನಾಳೆ ಶನಿವಾರ ಬೆಳಗಾವಿಗೆ ಬರುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಹೊಸ ಜಿಲ್ಲೆಗಳನ್ನು ಘೋಷಣೆ ಮಾಡಬೇಕು ಎಂದು ರಾಜ್ಯಸಭಾ ಸದಸ್ಯ ಈರಣ್ಣಾ ಕಡಾಡಿ ಆಗ್ರಹಿಸಿದರು.

ಶುಕ್ರವಾರ ಬೆಳಗಾವಿ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. ಬೆಳಗಾವಿ ಜಿಲ್ಲೆ ದೊಡ್ಡ ಜಿಲ್ಲೆ ಬೆಳಗಾವಿ ಜಿಲ್ಲೆ ವಿಭಜನೆಯಾಗಬೇಕೆಂಬ ಬೇಡಿಕೆ ಇದೆ. ಸಾಕಷ್ಟು ಬಾರಿ ಮನವಿ ಮಾಡಿದರೂ ಅದನ್ನು ಕಸದ ಬುಟ್ಟಿಗೆ ಹಾಕಿದ್ದೀರಿ. ನೀವು ಬೆಳಗಾವಿ ಜಿಲ್ಲೆಗೆ ಬಂದಾಗ ಹೊಸ ಜಿಲ್ಲೆ ಘೋಷಣೆ ಮಾಡಬೇಕು ಎಂದು ಒತ್ತಾಯಿಸಿದರು.

ನಾಳೆ ಮಳೆಯಿಂದ ಕೆಂಗೆಟ್ಟಿರುವ ಜಿಲ್ಲೆಯ ಜನತೆಗೆ ಒಂದೇ ಒಂದ ನಯಾಪೈಸೆ ಬಿಡುಗಡೆ ಮಾಡದೆ ಶನಿವಾರ ಬೆಳಗಾವಿಗೆ ಬರುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಸ್ವಾಗತ ಬಯಸುತ್ತೇನೆ. ಭೀಕರ ಮಳೆಯಿಂದ ಜನರು ಹಾಗೂ ರೈತರು ಬೆಳೆದ ಬೆಳೆಗಳು ಹಾನಿಯಾಗಿವೆ. ಆದ್ದರಿಂದ ನಾಳೆ ಮುಖ್ಯಮಂತ್ರಿ ಬೆಳಗಾವಿಗೆ ಬಂದಾಗ ಸಚಿವರು ನಿಮ್ಮ ಗಮನಕ್ಕೆ ತಂದು ಪರಿಹಾರ ಬಿಡುಗಡೆ ಮಾಡಿಸುತ್ತಾರೆ ಎನ್ನುವ ವಿಶ್ವಾಸದಿಂದ ಸ್ವಾಗತಿಸುತ್ತೇನೆ ಎಂದರು.

RELATED ARTICLES
- Advertisment -
Google search engine

Most Popular