Sunday, October 5, 2025
Google search engine

Homeಅಪರಾಧರಹ್ಮಾನ್ ಕೊಲೆ ಕೇಸ್: ಆರೋಪಿಗಳ ವಿರುದ್ಧ ಕೋಕಾ ಕಾಯ್ದೆಯಡಿ ಕೇಸ್ ದಾಖಲು

ರಹ್ಮಾನ್ ಕೊಲೆ ಕೇಸ್: ಆರೋಪಿಗಳ ವಿರುದ್ಧ ಕೋಕಾ ಕಾಯ್ದೆಯಡಿ ಕೇಸ್ ದಾಖಲು

ಮಂಗಳೂರು (ದಕ್ಷಿಣ ಕನ್ನಡ): 27-05-2025 ರಂದು ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಅಬ್ದುಲ್ ರೆಹಮಾನ್ ಕೊಲೆ ಪ್ರಕರಣದ ಪ್ರಮುಖ ಆರೋಪಿ ಭರತ್ ಕುಮ್ಡೇಲು ಸೇರಿದಂತೆ ಇತರ 13 ಆರೋಪಿಗಳ ವಿರುದ್ಧ ಕೋಕಾ ಕೇಸ್ ದಾಖಲಾಗಿದೆ.

ರಹ್ಮಾನ್‌ಕೊಲೆ ಸಂಬಂಧ ಅ.ಕ್ರಂ ಕಲಂ:103(1) 109(1), 118(1), 118(2), 61(2) (ಎ), 249(ಎ), 238(ಎ) ಜೊತೆಗೆ 3(5) ಬಿ.ಎನ್.ಎಸ್. ಮತ್ತು ಕಲಂ: 25(1) (ಎ) ಭಾರತೀಯ ಶಸ್ತ್ರಾಸ್ತ್ರಗಳ ಕಾಯ್ದೆ 1959 ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗಿ 13 ಆರೋಪಿಗಳನ್ನು ಬಂಧಿಸಿ, ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಮಾನ್ಯ ನ್ಯಾಯಾಲಯವು ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

ಈ ಪ್ರಕರಣದ ಇನ್ನೊಬ್ಬ ಆರೋಪಿ ಭರತ್ ರಾಜ್ ಯಾನೆ ಭರತ್ ಕುಮ್ಡೇಲು (29, ಪುದು ಗ್ರಾಮ) ತಲೆಮರೆಸಿಕೊಂಡಿದ್ದಾನೆ. ಈ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪಿಗಳು ಹಲವು ವರ್ಷಗಳಿಂದ ಕೊಲೆ, ಕೊಲೆ ಯತ್ನ, ಪ್ರಚೋದನಕಾರಿ ಭಾಷಣಗಳು ಸೇರಿದಂತೆ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ಪಾಲ್ಗೊಂಡಿದ್ದು, ಸಮಾಜದಲ್ಲಿ ಅಶಾಂತಿ ಮತ್ತು ಕೋಮು ಸಂಘರ್ಷಕ್ಕೆ ಕಾರಣರಾಗಿದ್ದಾರೆ. ಹೀಗಾಗಿ, ಅವರ ವಿರುದ್ಧ ಕರ್ನಾಟಕ ಸಂಘಟಿತ ಅಪರಾಧ ತಡೆ ಕಾಯ್ದೆ-2000 (THE KARNATAKA CONTROL OF ORGANISED CRIME ACT- 2000) ರ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಿ ತನಿಖೆ ನಡೆಸಲಾಗುತ್ತಿದೆ.

ಬಂಧಿತ ಆರೋಪಿಗಳನ್ನು ದೀಪಕ್, ಚಿಂತನ್, ಪೃಥ್ವಿರಾಜ್ ಜೋಗಿ, ಸುಮಿತ್ ಬಿ. ಆಚಾರ್ಯ, ವಿ.ರವಿರಾಜ ಮೂಲ್ಯ, ಅಭಿನ್ ರೈ, ತೇಜಾಕ್ಷ , ರವಿಸಂಜಯ್ ಜಿ.ಎಸ್, ಶಿವಪ್ರಸಾದ್ ತುಂಬೆ, ಪ್ರದೀಪ, ಶಾಹಿತ್, ಸಾಹಿತ್ , ಸಚಿನ್ @ ಸಚ್ಚು ರೊಟ್ಟಿಗುಡ್ಡೆ ಹಾಗೂ ರಂಜಿತ್ ಎಂದು ಗುರುತಿಸಲಾಗಿದೆ.

RELATED ARTICLES
- Advertisment -
Google search engine

Most Popular