Monday, October 6, 2025
Google search engine

Homeರಾಜ್ಯಸುದ್ದಿಜಾಲಕೇಂದ್ರ ಸಚಿವ ವಿ.ಸೋಮಣ್ಣ ಸಮಸಮಾಜದ ವಿರೋಧಿ: ಸಿಎಂ ಸಿದ್ದರಾಮಯ್ಯ ತಿರುಗೇಟು

ಕೇಂದ್ರ ಸಚಿವ ವಿ.ಸೋಮಣ್ಣ ಸಮಸಮಾಜದ ವಿರೋಧಿ: ಸಿಎಂ ಸಿದ್ದರಾಮಯ್ಯ ತಿರುಗೇಟು

ಕೊಪ್ಪಳ : ಜನರ ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯಲ್ಲಿ ಯಾವ ಜಾತಿಯವರನ್ನು ತುಳಿಯುವ ಪ್ರಶ್ನೆಯಿಲ್ಲ. ಸಮಸಮಾಜವನ್ನು ಬಯಸದವರು ಸಮೀಕ್ಷೆಯನ್ನು ವಿರೋಧಿಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.

ಅವರು ಇಂದು ಕೊಪ್ಪಳದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಕೇಂದ್ರ ಸಚಿವ ವಿ.ಸೋಮಣ್ಣ ಸಮಸಮಾಜದ ವಿರೋಧಿ:
ಮೇಲ್ಜಾತಿಗಳನ್ನು ತುಳಿಯಲು ಸಮೀಕ್ಷೆ ನಡೆಸಲಾಗುತ್ತಿದೆ ಎಂಬ ಕೇಂದ್ರ ಸಚಿವ ಸೋಮಣ್ಣ ಅವರ ಆರೋಪ ಬಾಲಿಶವಾದುದ್ದು. ಜನರ ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯನ್ನು ನಡೆಸದಿದ್ದರೆ, ಸಮಾಜದಲ್ಲಿ ಜನರ ಸ್ಥಿತಿಗತಿ ಬಗ್ಗೆ ಅರಿಯಲು ಸಾಧ್ಯವಿಲ್ಲ. ಈ ಸಮೀಕ್ಷೆಯಲ್ಲಿ ಯಾವ ಜಾತಿಯವರನ್ನು ತುಳಿಯುವ ಪ್ರಶ್ನೆಯಿಲ್ಲ. ಸಮಸಮಾಜ ನಿರ್ಮಾಣವನ್ನು ವಿರೋಧಿಸುವವರು ಇಂತಹ ಹೇಳಿಕೆಗಳನ್ನು ನೀಡುವ ಮೂಲಕ ಜನರ ದಾರಿ ತಪ್ಪಿಸುತ್ತಿದ್ದಾರೆ. ಈಗಾಗಲೇ 1.10 ಕೋಟಿ ಕುಟುಂಬಗಳ ಸಮೀಕ್ಷಾ ಕಾರ್ಯ ಮುಗಿದಿದ್ದು, ನಿನ್ನೆವರೆಗೆ ಶೇ.63 ರಷ್ಟು ಸರ್ವೇ ಕಾರ್ಯ ಪ್ರಗತಿಯಾಗಿದೆ. ನಾಳೆ ಸಂಜೆವರೆಗೆ ಸಮೀಕ್ಷೆಯ ಪ್ರಗತಿಯನ್ನು ಪರಿಶೀಲಿಸಿ, ಸಮೀಕ್ಷೆ ಅವಧಿ ವಿಸ್ತರಣೆ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು.

* ಲಿಂಗಾಯತ ಧರ್ಮದ ವಿಷಯದಲ್ಲಿ ಜನರ ನಿಲುವೇ ನನ್ನ ನಿಲುವು:
ಕೊಪ್ಪಳ ಜಿಲ್ಲೆಯಲ್ಲಿ ಶೇ.97 ರಷ್ಟು ಸಮೀಕ್ಷೆ ಪೂರ್ಣಗೊಂಡಿದ್ದು, ಇದು ಒಳ್ಳೆಯ ಬೆಳವಣಿಗೆ. ಸಮಾಜದಲ್ಲಿ ಬದಲಾವಣೆಯನ್ನು ವಿರೋಧಿಸುವವರು ಸಮೀಕ್ಷೆಯ ವಿರುದ್ಧ ಧ್ವನಿ ಎತ್ತುತ್ತಿದ್ದಾರೆ.
ಲಿಂಗಾಯತ ಧರ್ಮದ ವಿಷಯದಲ್ಲಿ ಜನರು ಸ್ವಯಂಪ್ರೇರಣೆಯಿಂದ ತಮ್ಮ ಧರ್ಮವನ್ನು ತಿಳಿಸಿದಂತೆ ಸಮೀಕ್ಷಾಗಾರರು ಧರ್ಮವನ್ನು ನಮೂದಿಸಿಕೊಳ್ಳುತ್ತಾರೆ. ಈ ಬಗ್ಗೆ ಜನರ ನಿಲುವೇ ನನ್ನ ನಿಲುವು.

* ಬಲ್ಡೋಟಾ ಕಾರ್ಖಾನೆ ಯೋಜನೆ ವಿಷಯ ನ್ಯಾಯಾಲಯದಲ್ಲಿದೆ:
ಬಲ್ಡೋಟಾ ಕಾರ್ಖಾನೆ ಯೋಜನೆ ಕುರಿತ ವಿಚಾರ ನ್ಯಾಯಾಲಯದಲ್ಲಿ ಇದ್ದು, ತೀರ್ಪಿನ ನಂತರ ಸೂಕ್ತ ಕ್ರಮ ಕೈಗೊಳ್ಳಲಾಗುವುದು.

ಕೆಮ್ಮಿನ ಔಷಧಗಳ ಮೇಲೆ ನಿಗಾ ಇಟ್ಟಿದ್ದೇವೆ:
ವಿವಿಧ ರಾಜ್ಯದಲ್ಲಿ ಕೆಮ್ಮಿನ ಔಷಧಿಯಿಂದ ಮಕ್ಕಳು ಅಸುನೀಗುತ್ತಿದ್ದು, ಈ ಬಗ್ಗೆ ಗಮನಹರಿಸುವಂತೆ ಆರೋಗ್ಯ ಇಲಾಖೆಗೆ ಸೂಚನೆ ನೀಡಲಾಗಿದೆ. ಈಗಾಗಲೇ ರಾಜ್ಯದಲ್ಲಿ ಲಭ್ಯವಿರುವ ಕೆಮ್ಮಿನ ಔಷಧಗಳ ಪರೀಕ್ಷೆಯನ್ನು ಇಲಾಖೆ ನಡೆಸಿದ್ದು, ಅಪಾಯಕಾರಿ ಅಂಶ ಪತ್ತೆಯಾದರೆ ಸೂಕ್ತ ಕ್ರಮ ತೆಗೆದುಕೊಳ್ಳುತ್ತೇವೆ.

– ಕೊಪ್ಪಳದಲ್ಲಿ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗಳಿಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ

RELATED ARTICLES
- Advertisment -
Google search engine

Most Popular