ಮಂಗಳೂರು (ದಕ್ಷಿಣ ಕನ್ನಡ) : ಮನೆಯಲ್ಲಿ ಬೆಂಕಿ ಅನಾಹುತ ಉಂಟಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ನೆರಿಯ ಗ್ರಾಮದ ಕಡ್ಡಿಬಾಗಿಲು ಎಂಬಲ್ಲಿ ನಡೆದಿದೆ.
ಘಟನೆಯಿಂದ ಮನೆಗೆ ಭಾರೀ ಹಾನಿಯಾದ ಘಟನೆ ಸೋಮವಾರ ರಾತ್ರಿ ನಡೆದಿದೆ. ಘಟನೆಯ ವೇಳೆ ಮನೆಯಲ್ಲಿ ಯಾರು ಇಲ್ಲದ ಕಾರಣ ಯಾವುದೇ ಸಾವು ನೋವು ಉಂಟಾಗಿಲ್ಲ. ಹರೀಶ್ ಎಂಬುವವರು ಭಜನೆ ಗುರುಗಳಾಗಿದ್ದು ಅವರು ತಮ್ಮ ತಂಡದೊಂದಿಗೆ ಬೇರೆಡೆ ತೆರಳಿದ್ದರು. ಪತ್ನಿ ಹಾಗೂ ಒಬ್ಬಳು ಮಗಳು ತವರು ಮನೆಗೆ ಹೋಗಿದ್ದರು.

ಇನ್ನಿಬ್ಬರು ಮಕ್ಕಳು ಮನೆಯಲ್ಲಿ ಇದ್ದರು. ಅವರು ಸಂಜೆಯ ವೇಳೆ ಪಕ್ಕದ ಮನೆಗೆ ಹೋಗಿದ್ದರು. ಇದೇ ವೇಳೆ ಬೆಂಕಿ ಅವಘ ಉಂಟಾಗಿದೆ. ಹಂಚಿನ ಮೇಲ್ಛಾವಣಿಯ ಮನೆ ಬಹುತೇಕ ಬೆಂಕಿಗೆ ಆಹುತಿಯಾಗಿದೆ.