ಬೆಂಗಳೂರು : ನಿಯಮ ಉಲ್ಲಂಘನೆ ಮಾಡಿದ್ದು ಅಲ್ಲದೆ, ಪೋಲಿಸ್ ಇಲಾಖೆಯ ಅನುಮತಿ ಪಡೆಯದೆ ಕನ್ನಡ ಬಿಗ್ ಬಾಸ್ ಸೀಸನ್ 12 ಶೋ ಆರಂಭಿಸಿದ್ದಕ್ಕಾಗಿ ನಿನ್ನೆ ಬಿಗ್ ಬಾಸ್ ಮನೆಗೆ ಬೀಗ ಜಡಿಯಲಾಗಿತ್ತು. ಬಿಗ್ ಬಾಸ್ ಮನೆಗೆ ಬೀಗ ಹಾಕಿದ್ದನ್ನು ಪ್ರಶ್ನಿಸಿ ಇಂದು ಹೈಕೋರ್ಟಿಗೆ ಕಾರ್ಯಕ್ರಮದ ಆಯೋಜಕರು ಅರ್ಜಿ ಸಲ್ಲಿಸಲಿದ್ದಾರೆ.
ಇಂದೇ ತುರ್ತು ವಿಚಾರಣೆಗೆ ಮನವಿ ಸಲ್ಲಿಕೆ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಜಾಲಿವುಡ್ ಸ್ಟುಡಿಯೋದಿಂದ ರಿಟ್ ಅರ್ಜಿ ಸಲ್ಲಿಕೆ ಸಾದ್ಯತೆ ಇದೆ ಎನ್ನಲಾಗಿದೆ. ನಿನ್ನೆ ಸಂಜೆ ಕಂದಾಯ ಅಧಿಕಾರಿಗಳು ಪೊಲೀಸರ ಸಮ್ಮುಖದಲ್ಲಿ ಬಿಗ್ ಬಾಸ್ ಮನೆಗೆ ಬೀಗ ಹಾಕಲಾಯಿತು ಬಳಿಕ ಒಂದು ಗಂಟೆಗಳ ಕಾಲ ಸ್ಪರ್ಧಿಗಳಿಗೆ ಮನೆಯಿಂದ ಹೊರಗಡೆ ಹೋಗಲು ಅವಕಾಶ ನೀಡಲಾಗಿತ್ತು. ಇದೀಗ ಈ ಒಂದು ಕ್ರಮವನ್ನು ಪ್ರಶ್ನೆಸಿ ಹೈಕೋರ್ಟ್ ಗೆ ಇಂದು ಜಾಲಿವುಡ್ ಸ್ಟುಡಿಯೋಸ್ ರಿಟ್ ಅರ್ಜಿ ಸಲ್ಲಿಸುವ ಸಾಧ್ಯತೆ ಇದೆ.