ವರದಿ: ಬೆಕ್ಕರೆ ಸತೀಶ್ ಆರಾಧ್ಯ
ಪಿರಿಯಾಪಟ್ಟಣ: ಗಾಂಧೀಜಿಯವರ ಆಶಯದಂತೆ ಪಾನಮುಕ್ತ ಸಮಾಜಕ್ಕೆ ಶ್ರಮಿಸುತ್ತಿರುವ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಕಾರ್ಯ ಶ್ಲಾಘನೀಯ ಎಂದು ಮಾಜಿ ಶಾಸಕರಾದ ಕೆ.ಮಹದೇವ್ ಮೆಚ್ಚುಗೆ ವ್ಯಕ್ತಪಡಿಸಿದರು.
ಪಿರಿಯಾಪಟ್ಟಣ ತಾಲೂಕಿನ ಬೆಟ್ಟದಪುರದಲ್ಲಿ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ಕೊಡಗು ಜಿಲ್ಲೆ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ನ ಪಿರಿಯಾಪಟ್ಟಣ ಬೆಟ್ಟದಪುರ ಸೋಮವಾರಪೇಟೆ ಅರಕಲಗೂಡು ಯೋಜನಾ ಕಚೇರಿ ಸಹಕಾರ, ಧರ್ಮಾಧಿಕಾರಿಗಳಾದ ವೀರೇಂದ್ರ ಹೆಗಡೆ ಮಾತೃಶ್ರೀ ಹೇಮಾವತಿ ಅಮ್ಮ ಅವರ ಕೃಪಾಶೀರ್ವಾದದೊಂದಿಗೆ ಗಾಂಧೀ ಜಯಂತಿ ಸಂಭ್ರಮಾಚರಣೆ ಪ್ರಯುಕ್ತ ನಡೆದ ಗಾಂಧಿ ಸ್ಮರಣೆ ಮತ್ತು ನವ ಜೀವನೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು,

ಶೈಕ್ಷಣಿಕ ಸಾಮಾಜಿಕ ಧಾರ್ಮಿಕ ಆರೋಗ್ಯ ಸೇರಿದಂತೆ ಸಮಾಜದ ಹಲವು ವಿಭಾಗಗಳಲ್ಲಿ ತನ್ನದೇ ಆದ ಸೇವೆ ನೀಡುತ್ತಿರುವ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಾರ್ಯ ವಿಶ್ವಕ್ಕೆ ಮಾದರಿಯಾಗಿದೆ, ದುಶ್ಚಟ ಮುಕ್ತ ಸಮಾಜಕ್ಕಾಗಿ ಮಧ್ಯವರ್ಜನ ಶಿಬಿರಗಳನ್ನು ಆಯೋಜಿಸಿ ಸಮಾಜದ ಏಳಿಗೆಗೆ ಶ್ರಮಿಸುತ್ತಿರುವುದು ಹೆಮ್ಮೆಯ ವಿಷಯವಾಗಿದೆ, ಗ್ರಾಮೀಣ ಭಾಗದ ಜನಸಾಮಾನ್ಯರ ಬಗ್ಗೆ ಹೆಚ್ಚು ಕಾಳಜಿ ವಹಿಸಿ ಅವರು ಸ್ವಾವಲಂಬಿಯಾಗಿ ಬದುಕಲು ಪೂಜ್ಯ ವೀರೇಂದ್ರ ಹೆಗಡೆ ಹಾಗೂ ಮಾತೃಶ್ರೀ ಹೇಮಾವತಿ ಅಮ್ಮ ಅವರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮೂಲಕ ಸಮಾಜದ ಅಭಿವೃದ್ಧಿಗೆ ತಮ್ಮದೇ ಆದ ಕೊಡುಗೆ ನೀಡುತ್ತಿದ್ದಾರೆ ಎಂದರು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಉಡುಪಿಯ ಪ್ರಾದೇಶಿಕ ನಿರ್ದೇಶಕರಾದ ಆನಂದ ಸುವರ್ಣ ಅವರು ಮಾತನಾಡಿ ದೇಶ ಪ್ರಗತಿಯಾಗಬೇಕಾದರೆ ಗ್ರಾಮಗಳ ಪ್ರಗತಿಯಾಗಬೇಕು ಎಂಬುದು ಮಹಾತ್ಮ ಗಾಂಧೀಜಿಯವರ ಕಲ್ಪನೆ ಅವರ ಆಶಯದಂತೆ ಧರ್ಮಾಧಿಕಾರಿಗಳಾದ ವೀರೇಂದ್ರ ಹೆಗಡೆ ಅವರು ಗ್ರಾಮೀಣ ಭಾಗದ ಜನ ಸ್ವಾವಲಂಬಿ ಬದುಕಿಗೆ ಹಲವು ಯೋಜನೆಗಳನ್ನು ಜಾರಿಗೆ ತಂದಿದ್ದಾರೆ ಎಂದರು.
ಅಖಿಲ ಕರ್ನಾಟಕ ಜನ ಜಾಗೃತಿ ವೇದಿಕೆ ನಿಕಟಪೂರ್ವ ರಾಜ್ಯಾಧ್ಯಕ್ಷರಾದ ಕೆ.ಸತೀಶ್ ಹೊನ್ನವಳ್ಳಿ, ಕೊಡಗು ಜಿಲ್ಲೆ ಸಂಸ್ಥಾಪಕ ಅಧ್ಯಕ್ಷರಾದ ಎಂ.ಬಿ ಅಭಿಮನ್ಯು ಕುಮಾರ್, ಅಧ್ಯಕ್ಷರಾದ ಎ.ಟಿ ರಂಗಸ್ವಾಮಿ, ಉಪಾಧ್ಯಕ್ಷರಾದ ಬಿ.ಜೆ ದೇವರಾಜ್, ಪುಂಡರೀಕಾಕ್ಷ, ಬೆಟ್ಟದಪುರ ಗ್ರಾಮ ಪಂಚಾಯತಿ ಅಧ್ಯಕ್ಷರಾದ ರಾಜಶೇಖರ್, ಕೊಡಗು ಜಿಲ್ಲಾ ನಿರ್ದೇಶಕಿ ಲೀಲಾವತಿ ಅವರು ಕಾರ್ಯಕ್ರಮ ಕುರಿತು ಮಾತನಾಡಿ ಶುಭಕೋರಿದರು, ಈ ವೇಳೆ ಪಾನಮುಕ್ತ ಸದಸ್ಯರಿಗೆ ಅಭಿನಂದನೆ ಸಲ್ಲಿಸಲಾಯಿತು.
ಈ ಸಂದರ್ಭ ಬೆಟ್ಟದಪುರ ಗ್ರಾಮ ಪಂಚಾಯತಿ ಉಪಾಧ್ಯಕ್ಷೆ ಲಕ್ಷ್ಮಿ, ಕೋಶಾಧಿಕಾರಿ ಶಾಂತಮಲ್ಲಪ್ಪ,
ಮುಖಂಡರಾದ ಎಚ್.ಡಿ ರಾಜೇಂದ್ರ, ಪುರಸಭಾ ಸದಸ್ಯೆ ಮಂಜುಳಾ ರಾಜ್, ಚೌಡೇಗೌಡ, ಬೆಟ್ಟದಪುರ ಯೋಜನಾಧಿಕಾರಿ ಸಂತೋಷ್ ಕುಮಾರ್ ಜೈನ್, ಪಿರಿಯಾಪಟ್ಟಣ ಯೋಜನಾಧಿಕಾರಿ ರವಿಕುಮಾರ್, ಸೋಮವಾರಪೇಟೆ ಯೋಜನಾಧಿಕಾರಿ ಹನುಮಂತಪ್ಪ ಹಾಗೂ ಜ್ಞಾನ ವಿಕಾಸ ಸಮನ್ವಯಾಧಿಕಾರಿ ಮಮಿತಾ, ಮೇಲ್ವಿಚಾರಕರು, ಸೇವಾ ಪ್ರತಿನಿಧಿಗಳು, ಒಕ್ಕೂಟ ಅಧ್ಯಕ್ಷರು ಪದಾಧಿಕಾರಿಗಳು ಮತ್ತು ಕಚೇರಿ ಸಿಬ್ಬಂದಿ ಇದ್ದರು.

ಪಾನಮುಕ್ತ ಸಮಾಜಕ್ಕೆ ಶ್ರಮಿಸುತ್ತಿರುವ ಧರ್ಮಸ್ಥಳ ಗ್ರಾಮಾಭಿವೃದ್ಧಿ ಕಾರ್ಯ ವಿಶ್ವಕ್ಕೆ ಮಾದರಿ ; ಮಾಜಿ ಶಾಸಕ ಕೆ.ಮಹದೇವ್ ಮೆಚ್ಚುಗೆ ಗಾಂಧೀ ಜಯಂತಿ ಸಂಭ್ರಮಾಚರಣೆ ಪ್ರಯುಕ್ತ ಗಾಂಧಿ ಜಯಂತಿ ಮತ್ತು ನವ ಜೀವನೋತ್ಸವ ಕಾರ್ಯಕ್ರಮ ಆಯೋಜನೆ