ರಾಯಚೂರು: ದೇವದುರ್ಗ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಶಾಸಕಿ ಜಿ. ಕರೆಮ್ಮಾ ನಾಯಕ್ ಅವರ ಕಾರು ರಾಯಚೂರು ಜಿಲ್ಲೆಯ ಲಿಂಗಸೂಗೂರು ತಾಲೂಕಿನ ಗೋಲಪಳ್ಳಿ ಬಳಿ ಅಪಘಾತಕ್ಕೀಡಾಗಿದೆ. ಅಪಘಾತದಲ್ಲಿ ಶಾಸಕಿ ಅವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಪ್ರಾಥಮಿಕ ಮಾಹಿತಿಯ ಪ್ರಕಾರ, ರಸ್ತೆಗೆ ಅಡ್ಡ ಬಂದ ನಾಯಿಯನ್ನು ತಪ್ಪಿಸಲು ಚಾಲಕ ಯತ್ನಿಸಿದ್ದಾಗ, ಕಾರು ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಬೆಟ್ಟಕ್ಕೆ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ.
ಅವರ ಆರೋಗ್ಯದಲ್ಲಿ ಯಾವುದೇ ಗಂಭೀರತೆ ಇಲ್ಲ ಎಂಬ ಮಾಹಿತಿ ಶ್ವಾಸರಾಗಿಸಿದೆ. ಶಾಸಕಿ ಕರೆಮ್ಮಾ ನಾಯಕ್ ಅವರು ಸ್ಥಳೀಯ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಪಡೆದು ಬಳಿಕ ವಿಶ್ರಾಂತಿ ಪಡೆಯುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.