Sunday, October 12, 2025
Google search engine

Homeರಾಜ್ಯಬೆಂಗಳೂರು: ಸಮೀಕ್ಷೆ ಕಾರ್ಯದ ವೇಳೆ ಶಿಕ್ಷಕಿಗೆ ಹೃದಯಾಘಾತ : ತಕ್ಷಣ ಚಿಕಿತ್ಸೆ ನೀಡಿದ ವೈದ್ಯರು

ಬೆಂಗಳೂರು: ಸಮೀಕ್ಷೆ ಕಾರ್ಯದ ವೇಳೆ ಶಿಕ್ಷಕಿಗೆ ಹೃದಯಾಘಾತ : ತಕ್ಷಣ ಚಿಕಿತ್ಸೆ ನೀಡಿದ ವೈದ್ಯರು

ಬೆಂಗಳೂರು : ಬೆಂಗಳೂರಿನಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕಾರ್ಯಕ್ಕೆ ತೆರಳಿದ್ದ ಶಿಕ್ಷಕಿಯೊಬ್ಬರಿಗೆ ಹೃದಯಾಘಾತ ಸಂಭವಿಸಿರುವ ಘಟನೆ ನಡೆದಿದೆ.

ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಬೊಮ್ಮಸಂದ್ರದಲ್ಲಿ ಯಶೋಧಾ ಎಂಬ ಶಿಕ್ಷಕಿ ಹೃದಯಾಘಾತಕ್ಕೆ ಒಳಗಾಗಿದ್ದಾರೆ. ಯಶೋಧಾ ಅವರು ಬೊಮ್ಮಸಂದ್ರ ಸರ್ಕಾರಿ ಶಾಲೆಯಲ್ಲಿ ದೈಹಿಕ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ಬೊಮ್ಮಸಂದ್ರದಲ್ಲಿ ಸಮೀಕ್ಷೆ ಕಾರ್ಯದಲ್ಲಿದ್ದಾಗಲೇ ಕುಸಿದು ಬಿದ್ದಿದ್ದಾರೆ. ಕೂಡಲೇ ಸ್ಥಳೀಯರು ಅವರನ್ನು ನಾರಾಯಣ ಹೆಲ್ತ್ ಸಿಟಿ ಆಸ್ಪತ್ರೆಗೆ ದಾಖಲಿಸಿದ್ದಾರೆ.ಅಲ್ಲಿ ವೈದ್ಯರು ಆಪರೇಷನ್ ಮಾಡಿ ಸ್ಟೆಂಟ್ ಅಳವಡಿಸಿದ್ದಾರೆ.

RELATED ARTICLES
- Advertisment -
Google search engine

Most Popular