Wednesday, October 15, 2025
Google search engine

Homeಅಪರಾಧವಿಮಾನದಲ್ಲಿ ಗಾಂಜಾ ಸಾಗಿಸಿ ಸಿಕ್ಕಿಬಿದ್ದ ವ್ಯಕ್ತಿ

ವಿಮಾನದಲ್ಲಿ ಗಾಂಜಾ ಸಾಗಿಸಿ ಸಿಕ್ಕಿಬಿದ್ದ ವ್ಯಕ್ತಿ

ಮಂಗಳೂರು : ವಿಮಾನದಲ್ಲಿ ಹೈಡ್ರೋಪೋನಿಕ್ ಗಾಂಜಾ ಸಾಗಿಸುತ್ತಿದ್ದ ವ್ಯಕ್ತಿಯನ್ನು ಸಿಐಎಸ್ಎಫ್ ಸಿಬ್ಬಂದಿಗಳು ವಶಕ್ಕೆ ಪಡೆದ ಘಟನೆ ಮಂಗಳೂರಲ್ಲಿ ನಡೆದಿದೆ.ಬಂಧಿತನನ್ನು ಶಂಕರ್ ನಾರಾಯಣ್ ಪೊದ್ದಾರ್ ಎಂದು ತಿಳಿದು ಬಂದಿದೆ. ಈತ ಸೋಮವಾರ ಸಂಜೆ 6.30ಕ್ಕೆ ಮುಂಬೈನಿಂದ ಮಂಗಳೂರಿಗೆ ಬಂದ ಇಂಡಿಗೋ ವಿಮಾನದಲ್ಲಿ ಹೈಡ್ರೋಪೋನಿಕ್ ಗಾಂಜಾ ಸಾಗಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಬಂದ ಹಿನ್ನೆಲೆಯಲ್ಲಿ ವಿಮಾನ ನಿಲ್ದಾಣ ಸಿಬ್ಬಂದಿ ವಿಮಾನ ನಿಲ್ದಾಣದ ಭದ್ರತಾ ಸಿಬ್ಬಂದಿ ಸಿಐಎಸ್ಎಫ್ ಸಿಬ್ಬಂದಿಗೆ ಮಾಹಿತಿ ನೀಡಿದ್ದರು.

ಅದರಂತೆ ಸಂಜೆ ಇಂಡಿಗೋ ವಿಮಾನದಲ್ಲಿ ಬಂದು ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಳಿಯುತ್ತಿದ್ದಂತೆ ಭದ್ರತಾ ಸಿಬ್ಬಂದಿ ವಶಕ್ಕೆ ಪಡೆದು ಪರಿಶೀಲನೆ ನಡೆಸಿದರು.

ಈ ವೇಳೆ ಶಂಕರ್ ನಾರಾಯಣ್ ಪೊದ್ದಾರ್ ನ ಚೆಕ್ – ಇನ್ ಬ್ಯಾಗೇಜ್ ನಲ್ಲಿ ಸುಮಾರು 512 ಗ್ರಾಂ ಹೈಡ್ರೋಪೋನಿಕ್ ಗಾಂಜಾ ಪತ್ತೆಯಾಗಿತ್ತು. ತಕ್ಷಣ ಬೆಂಗಳೂರು ವಿಮಾನ ನಿಲ್ದಾಣದ ಅಧಿಕಾರಿಗಳಿಗೆ ಮಾಹಿತಿ ರವಾನಿಸಿ, ಸಿಐಎಸ್ಎಫ್ ಸಿಬ್ಬಂದಿ ಪತ್ತೆಯಾದ ಗಾಂಜಾ ಸಹಿತ ಆರೋಪಿಯನ್ನು ಹೆಚ್ವಿನ ವಿಚಾರಣೆಗಾಗಿ ಬಜ್ಪೆ ಪೊಲೀಸರಿಗೆ ಹಸ್ತಾಂತರಿಸಿದ್ದಾರೆ.

RELATED ARTICLES
- Advertisment -
Google search engine

Most Popular