ಕೊಚ್ಚಿ: ಆಯುರ್ವೇದ ಚಿಕಿತ್ಸೆಗಾಗಿ ಕೇರಳಕ್ಕೆ ಬಂದಿದ್ದ ಕೀನ್ಯಾದ ಮಾಜಿ ಪ್ರಧಾನಿ ರೈಲಾ ಒಡಿಂಗಾ ಅವರು ಕೇರಳದ ಎರ್ನಾಕುಲಂ ಜಿಲ್ಲೆಯ ಕೂತಟ್ಟುಕುಲಂನಲ್ಲಿರುವ ಆಯುರ್ವೇದ ಕಣ್ಣಿನ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದಲ್ಲಿ ನಿಧನರಾದರು.
ಬೆಳಿಗ್ಗೆ 9 ಗಂಟೆ ಸುಮಾರಿಗೆ ರೈಲಾ ಒಡಿಂಗಾ ಅವರು ಕ್ಯಾಂಪಸ್‌ನಲ್ಲಿ ನಡೆಯುತ್ತಿದ್ದಾಗ ಹೃದಯಾಘಾತದಿಂದ ಕುಸಿದು ಬಿದ್ದು ಮೃತಪಟ್ಟಿದ್ದಾರೆ. ಕಳೆದ ಐದು ದಿನಗಳಿಂದ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಈ ವೇಳೆ ಅವರ ಪುತ್ರಿ ಮತ್ತು ವೈಯಕ್ತಿಕ ವೈದ್ಯರು ಅವರ ಜೊತೆಗಿದ್ದರು ಎಂದು ಶ್ರೀಧರೀಯಂ ಆಯುರ್ವೇದ ಕಣ್ಣಿನ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ಅಧಿಕಾರಿಗಳು ತಿಳಿಸಿದ್ದಾರೆ.
ಒಡಿಂಗಾ ಅವರ ಪಾರ್ಥಿವ ಶರೀರ ಹಸ್ತಾಂತರಕ್ಕೆ ಸಂಬಂಧಿಸಿದಂತೆ ಮುಂದಿನ ಕ್ರಮಕ್ಕಾಗಿ ಪ್ರಾದೇಶಿಕ ನೋಂದಣಿ ಕಚೇರಿಗೆ ಮಾಹಿತಿ ನೀಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.