ಬೆಂಗಳೂರು: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ನಡೆಸುತ್ತಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಇನ್ಫೋಸಿಸ್ ಸಂಸ್ಥಾಪಕ ಡಾ. ನಾರಾಯಣ ಮೂರ್ತಿ ಹಾಗೂ ಅವರ ಪತ್ನಿ ಸುಧಾ ಮೂರ್ತಿ ಅವರು ವೈಯಕ್ತಿಕ ಕಾರಣಗಳಿಂದ ಮಾಹಿತಿ ನೀಡಲು ನಿರಾಕರಿಸಿದ್ದಾರೆ.
ಅವರು ಆಯೋಗಕ್ಕೆ ಸಲ್ಲಿಸಿದ ಸ್ವಯಂ ದೃಢೀಕರಣ ಪತ್ರದಲ್ಲಿ, “ನಾವು ಹಿಂದುಳಿದ ವರ್ಗದವರಿಗೆ ಸೇರಿಲ್ಲ. ಈ ಸಮೀಕ್ಷೆಯಲ್ಲಿ ಭಾಗವಹಿಸುವುದು ಸರಕಾರಕ್ಕೆ ಉಪಯೋಗವಾಗದು” ಎಂಬ ಕಾರಣವನ್ನು ತಿಳಿಸಿದ್ದಾರೆ.

ಆಯೋಗವು ಈ ಸಮೀಕ್ಷೆಯಲ್ಲಿ ಭಾಗವಹಿಸುವುದು ಐಚ್ಛಿಕವಾಗಿದ್ದು, ಆಸಕ್ತರೇ ಮಾಹಿತಿ ನೀಡಬೇಕೆಂದು ಈಗಾಗಲೇ ಸ್ಪಷ್ಟಪಡಿಸಿದೆ. ಭಾಗವಹಿಸಲು ಇಚ್ಛೆ ಇಲ್ಲದವರು, ನಿರಾಕರಣೆಯ ಸ್ವಯಂ ದೃಢೀಕರಣ ಪತ್ರವನ್ನು ನೀಡಬೇಕು ಎಂಬ ಸೂಚನೆ ನೀಡಲಾಗಿದೆ.



