Tuesday, November 4, 2025
Google search engine

Homeರಾಜಕೀಯಜೆಡಿಎಸ್ ರಾಜ್ಯಾಧ್ಯಕ್ಷರ ಬದಲಾವಣೆ ಚರ್ಚೆ ಸದ್ಯಕ್ಕೆ ಇಲ್ಲ: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

ಜೆಡಿಎಸ್ ರಾಜ್ಯಾಧ್ಯಕ್ಷರ ಬದಲಾವಣೆ ಚರ್ಚೆ ಸದ್ಯಕ್ಕೆ ಇಲ್ಲ: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

ಬೆಂಗಳೂರು : ಜೆಡಿಎಸ್ ರಾಜ್ಯಾಧ್ಯಕ್ಷರ ಬದಲಾವಣೆ ಚರ್ಚೆ ಸದ್ಯಕ್ಕೆ ಇಲ್ಲ ಎಂದು ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ. ಜೆಡಿಎಸ್ ರಾಜ್ಯಾಧ್ಯಕ್ಷರ ಬದಲಾವಣೆ ವಿಚಾರಕ್ಕೆ ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದ ಅವರು, ರಾಜ್ಯಾಧ್ಯಕ್ಷರ ಬದಲಾವಣೆ ಬಗ್ಗೆ ಚರ್ಚೆಗೆ ಬಂದಿಲ್ಲ ಎಂದರು.

ಸದ್ಯ ನಾನೇ ಅಧ್ಯಕ್ಷ ಆಗಿ ಇದ್ದೇನೆ. ರಾಜ್ಯಾಧ್ಯಕ್ಷ ಬದಲಾವಣೆ ಬೇಡ ಅಂತ ಒಂದು ವಿಂಗ್ ಇದೆ. ಇನ್ನೊಂದು ಕಡೆ ನಿಖಿಲ್ ಕುಮಾರಸ್ವಾಮಿಗೆ ಜವಾಬ್ದಾರಿ ಕೊಡಬೇಕು ಅಂತ ಇದೆ. ಆದರೆ ಇದ್ಯಾವುದರ ಬಗ್ಗೆ ಚರ್ಚೆ ಆಗಿಲ್ಲ, ಸದ್ಯಕ್ಕೆ ಜೆಡಿಎಸ್ ರಾಜ್ಯಾಧ್ಯಕ್ಷ ಬದಲಾವಣೆ ಇಲ್ಲ ಎಂದು ತಿಳಿಸಿದರು.

ಇದೇ ವೇಳೆ ಸತೀಶ್ ಜಾರಕಿಹೊಳಿ ಸಿಎಂ ಆಗಲಿ ಎಂಬ ಯತೀಂದ್ರ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ಅವರ ಪಕ್ಷದ ಬೆಳವಣಿಗೆಗಳು ಏನಿದೆ ನಾವು ಅದರ ಬಗ್ಗೆ ಚರ್ಚೆ ಮಾಡೋ ಅವಶ್ಯಕತೆ ಇಲ್ಲ. ಅವರ ಪಕ್ಷದಲ್ಲಿ ಏನೇನು ಬೇಕು ಅವರು ತೀರ್ಮಾನ ಮಾಡಿಕೊಳ್ಳಲಿ ಎಂದರು.

ಸಮನ್ವಯ ಸಮಿತಿ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಶೀಘ್ರವೇ ಜೆಡಿಎಸ್-ಬಿಜೆಪಿ ನಡುವೆ ಸಮನ್ವಯ ಸಮಿತಿ ರಚನೆ ಆಗಲಿದೆ. ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು, ಬಿಜೆಪಿ ನಾಯಕರು ಬಂದು ಚರ್ಚೆ ಮಾಡಿದ್ದಾರೆ. ಬೆಂಗಳೂರಿಗೆ ಒಂದು, ರಾಜ್ಯಕ್ಕೆ ಒಂದು ಸಮನ್ವಯ ಸಮಿತಿ ರಚನೆ ಬಗ್ಗೆ ತೀರ್ಮಾನ ಆಗಿದೆ. ಒಂದು ವಾರ ಅಥವಾ 10 ದಿನಗಳಲ್ಲಿ ಅದರ ಬಗ್ಗೆ ಅಂತಿಮ ತೀರ್ಮಾನ ಮಾಡುತ್ತೇವೆ ಎಂದು ತಿಳಿಸಿದರು.

ಕೋರ್ ಕಮಿಟಿ ಪುನರ್ ರಚನೆ ವಿಚಾರ ಸಂಬಂಧ ಮಾತನಾಡಿ, ಕೋರ್ ಕಮಿಟಿ ಪುನರ್ ರಚನೆ ಬಗ್ಗೆ ನಮ್ಮ ಪಕ್ಷದಲ್ಲಿ ಒಂದು ಸಭೆ ಆಗಿದೆ. ಕೋರ್ ಕಮಿಟಿ ಮತ್ತು ಕಾರ್ಪೋರೇಷನ್ ಚುನಾವಣೆ ಸಂಬಂಧ ಪಕ್ಷ ಸಂಘಟನೆಗೆ ಸಮಿತಿ ಮಾಡುವ ನಿರ್ಧಾರ ಮಾಡಿದ್ದೇವೆ. ಮುಂದಿನ ದಿನಗಳಲ್ಲಿ ಆ ಬಗ್ಗೆ ತೀರ್ಮಾನ ಮಾಡುತ್ತೇವೆ ಎಂದು ಹೇಳಿದರು.

RELATED ARTICLES
- Advertisment -
Google search engine

Most Popular