ಬೆಂಗಳೂರು : ಬಿಗ್ ಬಾಸ್ ಕನ್ನಡ ಸೀಸನ್ 12 ಸದಾ ಒಂದಿಲ್ಲೊಂದು ಸುದ್ದಿಯಲ್ಲಿರುತ್ತದೆ . ಈ ಬಾರಿ ಸ್ಪರ್ಧಿಯೊಬ್ಬರ ವಿರುದ್ಧ ಪೊಲೀಸ್ ದೂರು ದಾಖಲಾಗಿದೆ. ಬಿಗ್ ಬಾಸ್ ಸೀಸನ್ 12ರ ಸ್ಪರ್ಧಿ ಅಶ್ವಿನಿ ಗೌಡ ವಿರುದ್ಧ ದೂರು ದಾಖಲಾಗಿದ್ದು, ಸಹ ಸ್ಪರ್ಧಿ ರಕ್ಷಿತಾ ಶೆಟ್ಟಿ ಅವರನ್ನು ನಿಂದಿಸಿದ ಆರೋಪದಲ್ಲಿ ಈ ದೂರು ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.
ಬಿಡದಿ ಪೊಲೀಸ್ ಠಾಣೆಯಲ್ಲಿ ಬಿಗ್ ಬಾಸ್ ಸ್ಪರ್ಧಿ ಅಶ್ವಿನಿ ಗೌಡ ವಿರುದ್ಧ ವಕೀಲರೊಬ್ಬರು ದೂರು ದಾಖಲಿಸಿದ್ದಾರೆ. ಹಿರಿಯ ವಕೀಲ ಪ್ರಶಾಂತ್ ಮೆತಲ್ ಎಂಬುವವರಿಂದ ಅಶ್ವಿನಿ ಗೌಡ ವಿರುದ್ಧ ಜಾತಿ ನಿಂದನೆ, ವ್ಯಕ್ತಿ ನಿಂದನೆ ಆರೋಪದಡಿ ಬಿಡದಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಿದ್ದಾರೆ ಎಂದು ತಿಳಿದುಬಂದಿದೆ.
ಬಿಗ್ಬಾಸ್ ಮನೆಯಲ್ಲಿ ಸಹಸ್ಪರ್ಧಿ ಬಗ್ಗೆ ಅಶ್ವಿನಿ ಗೌಡ ಅವಹೇಳನಕಾರಿ ಪದ ಬಳಕೆ ಮಾಡಿದ ಆರೋಪದ ಮೇರೆಗೆ ಆಕೆಯ ವಿರುದ್ಧ ಹೈಕೋರ್ಟ್ ವಕೀಲ ಪ್ರಶಾಂತ್ ಮೆತಾಲ್ ದೂರು ನೀಡಿದ್ದಾರೆ. ಇದು ವ್ಯಕ್ತಿ ನಿಂದನೆ ಎಂದು ಆರೋಪಿಸಿರುವ ಅವರು ಕಲರ್ಸ್ ಕನ್ನಡ ಬ್ಯುಸಿನೆಸ್ ಹೆಡ್ ಪ್ರಶಾಂತ್ ನಾಯಕ್ ಶೋ ಆಯೋಜಕರ ವಿರುದ್ಧವೂ ದೂರು ನೀಡಿದ್ದಾರೆ ಎಂದು ಬಲ್ಲ ಮೂಲಗಳಿಂದ ಮಾಹಿತಿ ಲಭಿಸಿದೆ.
ಸಮಾಜದಲ್ಲಿ ಎಲ್ಲರೂ ಒಂದೇ, ಯಾವುದೇ ಜಾತಿ ಭೇದ ಹರಡಬಾರದು. ಅಶ್ವಿನಿ ಗೌಡ ಮಾತನ್ನು ತೆಗೆಯದೇ ಕಾರ್ಯಕ್ರಮ ಪ್ರಸಾರ ಮಾಡಿದ್ದು ತಪ್ಪು. ಇದರಿಂದ ಕೆಟ್ಟ ಸಂದೇಶ ರವಾನೆಯಾಗುತ್ತದೆ ಎಂದು ದೂರುದಾರರು ಆರೋಪಿಸಿದ್ದಾರೆ. ವಕೀಲರು ನೀಡಿದ ದೂರು ಆಧರಿಸಿ ಬಿಡದಿ ಪೊಲೀಸರು ಎನ್ಸಿಆರ್ ದಾಖಲಿಸಿಕೊಂಡಿದ್ದಾರೆ ಎನ್ನಲಾಗಿದೆ.



                                    