Tuesday, November 4, 2025
Google search engine

Homeರಾಜ್ಯಸುದ್ದಿಜಾಲ4,500 ಕೆ.ಜಿ. ‘ಅನ್ನಭಾಗ್ಯ’ ಅಕ್ಕಿ ಜಪ್ತಿ, ಕಾರ್ಯಾಚರಣೆ ನಡೆಸಿದ ಅಧಿಕಾರಿಗಳು!

4,500 ಕೆ.ಜಿ. ‘ಅನ್ನಭಾಗ್ಯ’ ಅಕ್ಕಿ ಜಪ್ತಿ, ಕಾರ್ಯಾಚರಣೆ ನಡೆಸಿದ ಅಧಿಕಾರಿಗಳು!

ವರದಿ :ಸ್ಟೀಫನ್ ಜೇಮ್ಸ್.

ಹಾವೇರಿ ಜಿಲ್ಲೆಯ ಹಾನಗಲ್ ತಾಲ್ಲೂಕಿನ ತಿಳವಳ್ಳಿ ಬಳಿ, ಅನ್ನಭಾಗ್ಯ ಯೋಜನೆಯ 4,500 ಕೆ.ಜಿ. ಪಡಿತರ ಅಕ್ಕಿಯನ್ನು ಆಹಾರ ಇಲಾಖೆ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಈ ಬಗ್ಗೆ ಅಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ತಿಳವಳ್ಳಿ-ಹಂಸಬಾವಿ ರಸ್ತೆಯಲ್ಲಿ ಟಾಟಾ ಗೂಡ್ಸ್ ವಾಹನದಲ್ಲಿ ಅಕ್ರಮವಾಗಿ ಅಕ್ಕಿಯನ್ನು ಸಾಗಿಸಲಾಗುತ್ತಿತ್ತು. ಅಕ್ಟೊಬರ್ 24 ರಂದು ರಾತ್ರಿ ಆಹಾರ ಇಲಾಖೆ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ, ವಾಹನದೊಡನೆ ಅಕ್ಕಿ ಪತ್ತೆ ಮಾಡಿದ್ದಾರೆ. ಹಾನಗಲ್ ತಹಶೀಲ್ದಾರ್ ಕಚೇರಿಯ ಆಹಾರ ಇಲಾಖೆ ಶಿರಸ್ತೆದಾರ ವೆಂಕಟೇಶ ಸಂಗಪ್ಪ ದೊಡ್ಡಮನಿ ದೂರು ನೀಡಿರುವ ಬಗ್ಗೆ ಪೊಲೀಸರು ತಿಳಿಸಿದ್ದಾರೆ.

100 ಚೀಲಗಳಲ್ಲಿ ತುಂಬಿದ್ದ ₹ 1.30 ಲಕ್ಷ ಮೌಲ್ಯದ 4,500 ಕೆ.ಜಿ. ಪಡಿತರ ಅಕ್ಕಿಯನ್ನು ಜಪ್ತಿ ಮಾಡಲಾಗಿದೆ. ಆರೋಪಿಗಳು ಎನ್ನಲಾದ ಅಕ್ಕಿಆಲೂರಿನ ಅನಿಲಕುಮಾರ ಕರಿಬಸಪ್ಪ ಮಾಳಗಿ ಹಾಗೂ ಬಂಕಾಪುರದ ಸುರೇಶ ಎಂಬುವವರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಚಾಲಕ ವಾಹನ ಬಿಟ್ಟು ಪರಾರಿಯಾಗಿದ್ದಾನೆ ಎಂದು ಹೇಳಿದರು.

ಬಿಪಿಎಲ್ ಪಡಿತರ ಚೀಟಿದಾರರಿಗೆ ಅನ್ನಭಾಗ್ಯ ಯೋಜನೆಯಡಿ ರಾಜ್ಯ ಸರ್ಕಾರ ಉಚಿತವಾಗಿ ಅಕ್ಕಿ ನೀಡುತ್ತಿದೆ. ಇದೇ ಅಕ್ಕಿಯನ್ನು ಫಲಾನುಭವಿಗಳಿಂದ ಖರೀದಿಸುತ್ತಿರುವ ಕೆಲವರು, ಅದನ್ನು ಕಾಳಸಂತೆಯಲ್ಲಿ ಮಾರುತ್ತಿರುವ ಮಾಹಿತಿಯಿದೆ. ಈಗ ಸಿಕ್ಕಿರುವ ಅಕ್ಕಿಯನ್ನು ಎಲ್ಲಿಂದ ಖರೀದಿಸಲಾಗಿತ್ತು ಹಾಗೂ ಎಲ್ಲಿಗೆ ಕಳುಹಿಸಲಾಗುತ್ತಿತ್ತು ಎಂಬುದು ತನಿಖೆ ಮೂಲಕ ತಿಳಿಯಬೇಕಿದೆ ಎಂದು ಪೊಲೀಸರು ತಿಳಿಸಿದರು.

ಕಾರ್ಯಾಚರಣೆ ಬಗ್ಗೆ ಪ್ರತಿಕ್ರಿಯಿಸಿದ ಆಹಾರ ಇಲಾಖೆ ಉಪನಿರ್ದೇಶಕ ಮಂಜುನಾಥ್, 4,500 ಕೆ.ಜಿ. ಪಡಿತರ ಅಕ್ಕಿ ಜಪ್ತಿ ಮಾಡಲಾಗಿದ್ದು, ಪೊಲೀಸರಿಗೂ ದೂರು ನೀಡಲಾಗಿದೆ. ತನಿಖೆಯಿಂದಲೇ ಮತ್ತಷ್ಟು ಮಾಹಿತಿ ತಿಳಿಯಬೇಕಿದೆ’ ಎಂದು ಹೇಳಿದರು.

RELATED ARTICLES
- Advertisment -
Google search engine

Most Popular