Tuesday, November 4, 2025
Google search engine

Homeಸ್ಥಳೀಯನಾಳೆ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್ ಮೈಸೂರು ಜಿಲ್ಲಾ ಪ್ರವಾಸ

ನಾಳೆ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್ ಮೈಸೂರು ಜಿಲ್ಲಾ ಪ್ರವಾಸ

ಮೈಸೂರು:ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲ ಸೌಲಭ್ಯ ಅಭಿವೃದ್ಧಿ ಸಚಿವ ಎಂ.ಬಿ ಪಾಟೀಲ್  ಅವರು ಅಕ್ಟೋಬರ್ 29 ರಂದು ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.

ನಾಳೆ ಬೆಳಗ್ಗೆ 10 ಗಂಟೆಗೆ ಮೈಸೂರು ರೈಲ್ವೇ ನಿಲ್ದಾಣದ ಪಕ್ಕದಲ್ಲಿರುವ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಭೇಟಿ ಹಾಗೂ ಕಾರ್ಯಕರ್ತರೊಂದಿಗೆ ಚರ್ಚೆ ನಡೆಸಲಿದ್ದಾರೆ. ಬೆಳಗ್ಗೆ 11 ಗಂಟೆಯಿoದ ಮಧ್ಯಾಹ್ನ 2 ಗಂಟೆಯ ವರೆಗೆ ಮೈಸೂರಿನ ವಿವಿಧ ಕೈಗಾರಿಕಾ ಘಟಗಳಿಗೆ ಎಂ.ಬಿ ಪಾಟೀಲ್ ಭೇಟಿ ನೀಡಲಿದ್ದಾರೆ.

ನಂತರ ಮಧ್ಯಾಹ್ನ 2.30 ಗಂಟೆಗೆ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಮೈಸೂರು ವಿವಿಧ ಕೈಗಾರಿಕಾ ಸಂಘಟನೆಗಳ ಪದಾಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ.

ಮಧ್ಯಾಹ್ನ03 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಮೈಸೂರು ಜಿಲ್ಲೆ ವ್ಯಾಪ್ತಿಯ ಕೈಗಾರಿಕಾ ಇಲಾಖೆ ಹಾಗೂ KIADB ವಿಷಯಗಳ ಕುರಿತಂತೆ ಜಿಲ್ಲಾಧಿಕಾರಿ ಹಾಗೂ ಇತರೆ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸಲಿದ್ದಾರೆ.

RELATED ARTICLES
- Advertisment -
Google search engine

Most Popular