Monday, November 3, 2025
Google search engine

Homeರಾಜ್ಯಸುದ್ದಿಜಾಲಒಳ ಮೀಸಲಾತಿ ಕುರಿತು ರಾಜ್ಯ ಸರ್ಕಾರದಿಂದ ಗೊಂದಲ ಸೃಷ್ಟಿ: ಸಂಸದ ಕಾರಜೋಳ ಆರೋಪ.

ಒಳ ಮೀಸಲಾತಿ ಕುರಿತು ರಾಜ್ಯ ಸರ್ಕಾರದಿಂದ ಗೊಂದಲ ಸೃಷ್ಟಿ: ಸಂಸದ ಕಾರಜೋಳ ಆರೋಪ.

REPORTER:STEPHEN JAMES

ರಾಜ್ಯದಲ್ಲಿ ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿ ಜಾರಿಯಾಗಬೇಕು. 101 ಜಾತಿಗಳಿಗೆ ಸಾಮಾಜಿಕ ನ್ಯಾಯ ಮತ್ತು ಮೀಸಲಾತಿ ಸಿಗಬೇಕೆಂದು ಮೂರು ದಶಕದಿಂದ ನಿರಂತರ ಹೋರಾಟ ಮಾಡಲಾಗಿತ್ತು.

ಒಳ ಮೀಸಲಾತಿ ಜಾರಿ ಮಾಡುವಲ್ಲಿ ರಾಜ್ಯ ಸರ್ಕಾರ ವಿಳಂಬ ಮಾಡುತ್ತಿದ್ದು, ಈ ಮೂಲಕ 101 ಪರಿಶಿಷ್ಟ ಜಾತಿ (ಎಸ್‌ಸಿ) ಗಳ ಹಿತಾಸಕ್ತಿಗಳನ್ನು ರಕ್ಷಿಸುವಲ್ಲಿ ವಿಫಲವಾಗಿದೆ ಎಂದು ವಿರೋಧ ಪಕ್ಷ ಬಿಜೆಪಿ ಆರೋಪಿಸಿದೆ.

ರಾಜ್ಯ ಸರ್ಕಾರ ಒಳ ಮೀಸಲಾತಿ ಕುರಿತು ಗೊಂದಲ ಸೃಷ್ಟಿಸುತ್ತಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಮತ್ತು ಸಂಸದ ಗೋವಿಂದ ಕಾರಜೋಳ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿ ಜಾರಿಯಾಗಬೇಕು. 101 ಜಾತಿಗಳಿಗೆ ಸಾಮಾಜಿಕ ನ್ಯಾಯ ಮತ್ತು ಮೀಸಲಾತಿ ಸಿಗಬೇಕೆಂದು ಮೂರು ದಶಕದಿಂದ ನಿರಂತರ ಹೋರಾಟ ಮಾಡಲಾಗಿತ್ತು. ಪ್ರಧಾನಿ ಮೋದಿ ಸರ್ಕಾರ ಮುತುವರ್ಜಿ ವಹಿಸಿ ನ್ಯಾಯ ದೊರಕಿಸಿಕೊಟ್ಟು ಒಂದು ವರ್ಷವಾದರೂ ರಾಜ್ಯ ಸರ್ಕಾರ ವಿಳಂಬ ನೀತಿ ಅನುಸರಿಸುತ್ತಾ ಗೊಂದಲ ಸೃಷ್ಟಿಸುತ್ತಿದೆ ಎಂದು ಟೀಕಿಸಿದರು.

ಒಂದು ಜಾತಿಯ ಹಿತಕ್ಕಾಗಿ ಸಿದ್ದರಾಮಯ್ಯ ಈ ರೀತಿ ಆಟ ಆಡುತ್ತಿದ್ದಾರೆ. 101 ಜಾತಿಯ ಹಿತ ಕಾಯಲು ಅವರು ಬಯಸುತ್ತಿಲ್ಲ. ಅವರದ್ದೇ ಸರ್ಕಾರ ನೇಮಿಸಿದ ನ್ಯಾಯಮೂರ್ತಿ ನಾಗಮೋಹನ್ ದಾಸ್ ಸಮಿತಿಯು ಮಂಡಿಸಿದ ವರದಿಯನ್ನು ಸರ್ಕಾರ ಸ್ವೀಕರಿಸಿಲ್ಲ. ಆರ್ಥಿಕ ಸಂಕಷ್ಟ ಇರುವುದರಿಂದ ನೇಮಕಾತಿ ಮುಂದೂಡಿಕೆಯಾದಷ್ಟೂ ಒಳ್ಳೆಯದೆಂಬ ಭಾವನೆ ಅವರಿಗಿದೆ. ಖಜಾನೆ ಖಾಲಿ ಆಗಿದ್ದು, ನೇಮಕಾತಿ ಮಾಡಲೂ ಅವರು ತಯಾರಿಲ್ಲ ಎಂದು ದೂರಿದರು.

RELATED ARTICLES
- Advertisment -
Google search engine

Most Popular